NewsKarnataka
Sunday, January 16 2022

ಬೆಂಗಳೂರು

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಲಿದೆ: ಸಚಿವ ಹಾಲಪ್ಪ ಆಚಾರ್

ಬೆಂಗಳೂರು : ರಾಜ್ಯದ ಅಂಗನವಾಡಿ ಕಾರ್ಯಕರ್ತೆ ಯರು ಬಹಳಷ್ಟು ಒಳ್ಳೆಯ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಹಲವಾರು ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಹಲವಾರು ಬಾರಿ ಪ್ರತಿಭಟನೆ ಹಾಗೂ ಹೋರಾಟ ನಡೆಸಿದ್ದಾರೆ. ಅವರ ಬೇಡಿಕೆಗಳಿಗೆ ಸರ್ಕಾರ ಶೀಘ್ರದಲ್ಲಿ ಸ್ಪಂದಿಸಲಿದೆ ಎಂದು ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ.

ಇಂದು ಖನಿಜ ಭವನದಲ್ಲಿ ಅಂಗನವಾಡಿ ಕಾರ್ಯಕರ್ತೆ ಯರ ಪ್ರತಿನಿಧಿಗಳು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಯರಿಗೆ ಈ ಭರವಸೆಯನ್ನು ನೀಡಲಾಯಿತು. ಈ ಸಭೆಯಲ್ಲಿ ಮಾತನಾಡಿರುವ ಸಚಿವ ಹಾಲಪ್ಪ ಆಚಾರ್, “ರಾಜ್ಯದ ಅಂಗನವಾಡಿ ಕಾರ್ಯಕರ್ತೆ ಯರು ಬಹಳಷ್ಟು ಒಳ್ಳೆಯ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಹಲವಾರು ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಹಲವಾರು ಬಾರಿ ಪ್ರತಿಭಟನೆ ಹಾಗೂ ಹೋರಾಟ ನಡೆಸಿದ್ದಾರೆ.

ಆದರೂ ಕೂಡಾ ಕೆಲವೊಂದು ತಾಂತ್ರಿಕ ಹಾಗೂ ಆಡಳಿತಾತ್ಮಕ ವಿಷಯಗಳಿಂದಾಗಿ ಕೆಲವು ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಾಗಿಲ್ಲ. ಈ ಎಲ್ಲಾ ಬೇಡಿಕೆಗಳ ಬಗ್ಗೆ ಇಂದು ಅಧಿಕಾರಿಗಳ ಸಮ್ಮುಖದಲ್ಲಿ ವಿಸ್ತೃತ ಚರ್ಚೆ ನಡೆಸಲಾಗಿದೆ. ಅಲ್ಲದೆ, ಹಲವಾರು ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗಿದೆ” ಎಂದು ಸಚಿವರು ತಿಳಿಸಿದರು.

ಈ ಸಭೆಯಲ್ಲಿ ಇಲಾಖೆಯ ನಿರ್ದೇಶಕರಾದ ಶ್ರೀಮತಿ ಅನುರಾಧ, ಜಂಟಿ ನಿರ್ದೇಶಕರಾದ ಶ್ರೀಮತಿ ಉಷಾ, ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆಯಾದ ಶ್ರೀಮತಿ ಎಸ್. ವರಲಕ್ಷ್ಮಿ ಹಾಗೂ ಇತರೆ ಸದಸ್ಯರು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.