ಬೆಂಗಳೂರು : ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳು ಆರಂಭವಾದ ಎರಡನೇ ದಿನ ವಿದ್ಯಾರ್ಥಿಗಳ ಹಾಜರಾತಿಯಲ್ಲಿ ಭರ್ಜರಿ ಏರಿಕೆ ಕಂಡುಬಂದಿದ್ದು, ಶೇ.60 ದಾಟಿದೆ ಎಂದು ತಿಳಿದುಬಂದಿದೆ.
ಈ ಕುರಿತು ಸಚಿವ ಬಿ ಸಿ ನಾಗೇಶ್ ಅವರು ಮಾಹಿತಿ ನೀಡಿದ್ದು, ಭೌತಿಕ ತರಗತಿ ಆರಂಭವಾದ ಮೊದಲ ದಿನ ಶೇ.51ರಷ್ಟು ಮಕ್ಕಳು ಹಾಜರಾಗಿದ್ದರು. ಎರಡನೇ ದಿನ ಶೇ.60ರಷ್ಟು ಮಕ್ಕಳು ಹಾಜರಾಗಿದ್ದಾರೆ. ‘ಬೇಸಿಗೆ ರಜೆ ಬಳಿಕ ಶಾಲೆ ಆರಂಭದ ಮೊದಲ ದಿನ ಹಾಜರಾತಿ ಕಡಿಮೆಯೇ ಇರುತ್ತದೆ. ಆದರೆ, ಕೋವಿಡ್-19 ಸಾಂಕ್ರಾಮಿಕ ಸಂದರ್ಭದಲ್ಲಿ ರಾಜ್ಯದಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕೆಲ ಜಿಲ್ಲೆಗಳಲ್ಲಿ ಗರಿಷ್ಠ ಶೇ.76ಕ್ಕೂ ಹೆಚ್ಚಿದೆ. ಒಟ್ಟಾರೆ ವಿದ್ಯಾರ್ಥಿಗಳ ಹಾಜರಾತಿ ಶೇ.41ಕ್ಕೂ ಹೆಚ್ಚಿದೆ. ಇದು ಆಶಾದಾಯಕ ಬೆಳವಣಿಗೆ. ಮುಂಬರುವ ದಿನಗಳಲ್ಲಿ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಜರಾಗುವ ನಿರೀಕ್ಷೆ ಇದೆ’ ಎಂದು ಹೇಳಿದರು.
ಕೋವಿಡ್‌ನಿಂದಾಗಿ ಭೌತಿಕ ಶಿಕ್ಷಣದಿಂದ ಮಕ್ಕಳು ವಂಚಿತರಾಗಿರುವ ಬೇಸರ ನನ್ನನ್ನು ಕಾಡುತ್ತಿತ್ತು. ಅಲ್ಲದೇ, ಮಕ್ಕಳು ಮನೆಯಲ್ಲೇ ಇದ್ದು ಮಾನಸಿಕವಾಗಿಯು ಕುಗ್ಗುತ್ತಿದ್ದಾರೆ ಎನಿಸಿತು. ಈ ಎಲ್ಲ ಕಾಯುವಿಕೆ ಅಂತ್ಯವಾಗಿದೆ. ತರಗತಿಗಳ ಆರಂಭದೊಂದಿಗೆ ನವ ಯುಗ ಆರಂಭವಾಗಿದೆ ಎಂದು ತಿಳಿಸಿದ್ದಾರೆ.