ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಇಂದು ಮೊದಲ ಬಾರಿಗೆ ಬಿ. ಎಸ್. ಯಡಿಯೂರಪ್ಪ ತವರು ಜಿಲ್ಲೆಗೆ ಹೊರಟಿದ್ದಾರೆ.
ಇಂದಿನಿಂದ ನಾಲ್ಕು ದಿನಗಳ ಕಾಲ ಶಿವಮೊಗ್ಗ ಜಿಲ್ಲಾ ಪ್ರವಾಸವನ್ನು ಕೈಗೊಂಡಿರುವ ಬಿ.ಎಸ್.ಯಡಿಯೂರಪ್ಪ ಇಂದು ಮಧ್ಯಾಹ್ನ ಬೆಂಗಳೂರಿನಿಂದ ಹೊರಟು, ರಾತ್ರಿಯ ವೇಳೆಗೆ ಶಿವಮೊಗ್ಗ ಜಿಲ್ಲೆ ತಲುಪಲಿದ್ದಾರೆ.
ಶಿವಮೊಗ್ಗದ ತಮ್ಮ ನಿವಾಸದಲ್ಲಿ ವಾಸ್ತವ್ಯ ಹೂಡಲಿದ್ದು, ಶನಿವಾರ (ಆ.28) ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಈ ಬಳಿಕ ಭಾನುವಾರದಂದು ಬೆಳಗ್ಗೆ ಶಿಕಾರಿಪುರಕ್ಕೆ ತೆರಳಿ, ಅಲ್ಲಿನ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.