News Kannada
Sunday, November 27 2022

ಬೆಂಗಳೂರು

ರಾಜ್ಯದಲ್ಲಿ ಸಾವಿರಕ್ಕಿಂತ ಕಡಿಮೆಗೆ ಇಳಿದ ಕೋವಿಡ್‌ ಪ್ರಕರಣ - 1 min read

coivd 19
Photo Credit :

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಸಾವಿರಕ್ಕಿಂತ ಕಡಿಮೆ ಬಂದಿದೆ. ಇಂದು 973 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,48,228ಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದ ಜಿಲ್ಲೆಗಳಾದ ಬಾಗಲಕೋಟೆ, ಬೀದರ್, ರಾಯಚೂರು ಮತ್ತು ವಿಜಯಪುರದಲ್ಲಿ ಶೂನ್ಯ ಪ್ರಕರಣ ಪತ್ತೆಯಾಗಿದೆ.

ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 15 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,293ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.

ಬೆಂಗಳೂರಿನಲ್ಲಿ ಇಂದು 264 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,37,550ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 3 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 1,324 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,92,517ಕ್ಕೆ ಏರಿಕೆಯಾಗಿದೆ. ಇನ್ನು 18,392 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,51,219 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 973 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.64ಕ್ಕೆ ಇಳಿದಿದೆ.

See also  97 ಕೋಟಿ ಲಸಿಕೆ ವ್ಯಾಪ್ತಿ ಪಡೆದ ಭಾರತ‌
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು