NewsKarnataka
Friday, January 21 2022

ಬೆಂಗಳೂರು

ರಾಜಧಾನಿಯಲ್ಲಿ ಡೆಂಗ್ಯೂ ಭೀತಿ

ಬೆಂಗಳೂರು: ಕೊರೊನಾ‌ ಸಮಸ್ಯೆಯ ಬೆನ್ನಲ್ಲೆ ಇದೀಗಾ ಬೆಂಗಳೂರಿನಲ್ಲಿ ಡೆಂಗ್ಯೂ ಭೀತಿ ಎದುರಾಗಿದೆ.ಮಳೆಗಾಲದಲ್ಲಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳಲ್ಲಿಯೂ ಕ್ರಮೇಣವಾಗಿ ಏರಿಕೆಯಾಗಿರುವುದು ಕಂಡುಬಂದಿದೆ. ಮೂರು ತಿಂಗಳಿನಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಆರು ಪಟ್ಟು ಏರಿಕೆಯಾಗಿದೆ. ಮಳೆಗಾಲಕ್ಕೂ ಮುನ್ನ, ಮೇ ತಿಂಗಳಿನಲ್ಲಿ 102 ಡೆಂಗ್ಯೂ ಪ್ರಕರಣಗಳಿದ್ದು, ಆಗಸ್ಟ್‌ ತಿಂಗಳಿನಲ್ಲಿ 677 ಪ್ರಕರಣಗಳಿಗೆ ಏರಿಕೆಯಾಗಿದೆ.

ಡೆಂಗ್ಯೂ ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿದೆ. ಆದರೆ ಪರಿಸ್ಥಿತಿ ಆತಂಕಕಾರಿಯಲ್ಲ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ. ಬಿಬಿಎಂಪಿ ಪ್ರಕಾರ, ನಗರದಲ್ಲಿ ಮೇ ತಿಂಗಳಿನಿಂದ ಆಗಸ್ಟ್‌ವರೆಗೆ 12,203 ಮಾದರಿಗಳ ಡೆಂಗ್ಯೂ ಪರೀಕ್ಷೆ ನಡೆಸಲಾಗಿದೆ. ಅದರಲ್ಲಿ 1304 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಬಿಬಿಎಂಪಿಯ ಎಂಟು ವಲಯಗಳ ಪೈಕಿ ಪೂರ್ವ ವಲಯದಲ್ಲಿ ಅತಿ ಹೆಚ್ಚಿನ ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಪೂರ್ವ ವಲಯದಲ್ಲಿ 438 ಪ್ರಕರಣಗಳಿದ್ದು, ದಕ್ಷಿಣ ವಲಯದಲ್ಲಿ 319 ಪ್ರಕರಣಗಳು ವರದಿಯಾಗಿವೆ.

ಮೇ ತಿಂಗಳಿನಿಂದಲೂ ಪಾಲಿಕೆ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆಯಲ್ಲಿ ನಿರಂತರ ಏರಿಕೆಯಾಗಿದೆ. ಮೇ ತಿಂಗಳಿನಲ್ಲಿ 102 ಇದ್ದ ಡೆಂಗ್ಯೂ ಪ್ರಕರಣಗಳು ಜೂನ್ ತಿಂಗಳಿನಲ್ಲಿ 174 ಪ್ರಕರಣಗಳಿಗೆ ಏರಿಕೆಯಾಗಿದೆ. ಜುಲೈ ತಿಂಗಳಿನಲ್ಲಿ 351 ಪ್ರಕರಣಗಳು ಹಾಗೂ ಆಗಸ್ಟ್‌ ತಿಂಗಳಿನಲ್ಲಿ 677 ಪ್ರಕರಣಗಳು ದಾಖಲಾಗಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616
Subscribe to our Brand New YouTube Channel

Subscribe Newsletter

Get latest news karnataka updates on your email.