News Kannada
Wednesday, September 28 2022

ಬೆಂಗಳೂರು

ಸಾವಿನ ಸಂಖ್ಯೆ ಮರೆಮಾಚಿದ ಸರ್ಕಾರ: ರಾಮಲಿಂಗಾರೆಡ್ಡಿ ಆರೋಪ - 1 min read

Photo Credit :

ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟವರಿಗೆ ಪರಿಹಾರ ನೀಡಬೇಕಾಗುತ್ತದೆ ಎಂಬ ಕಾರಣಕ್ಕೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಸಾವಿನ ಸಂಖ್ಯೆಯನ್ನು ಮರೆಮಾಚುತ್ತಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರದ ಮಾಹಿತಿ ಪ್ರಕಾರ ಕೋವಿಡ್‌ನಿಂದ ಸತ್ತಿರುವವರ ಸಂಖ್ಯೆ 37,318. ಈ ಬಗ್ಗೆ ವಿಧಾನ ಮಂಡಲ ಅಧಿವೇಶನದಲ್ಲಿ ಕೋವಿಡ್ ವಿಚಾರ ಚರ್ಚೆ ಬಂದಾಗ ಈ ವಿಷಯ ಪ್ರಸ್ತಾಪಿಸುತ್ತೇವೆ’ ಎಂದರು.

ಜನನ ಹಾಗೂ ಮರಣ ಇಲಾಖೆ ಪ್ರಕಾರ ರಾಜ್ಯದಲ್ಲಿ 2018ರಲ್ಲಿ 4,83,511, 2019ರಲ್ಲಿ 5,08,584, 2020ರಲ್ಲಿ 5,51,808 ಜನ ಸತ್ತಿದ್ದಾರೆ. ಪ್ರತಿ ವರ್ಷ ಸತ್ತವರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ. 2021ರ ಜುಲೈ ತಿಂಗಳವರೆಗೂ 4.21 ಲಕ್ಷ ಜನ ಸತ್ತಿದ್ದಾರೆ. ಪ್ರತಿವರ್ಷ ಆರಂಭಿಕ ಏಳು ತಿಂಗಳ ಸಾವಿನ ಸಂಖ್ಯೆ ನೋಡುವುದಾದರೆ, 2018ರಲ್ಲಿ 2.69 ಲಕ್ಷ , 2019ರಲ್ಲಿ 2.79 ಲಕ್ಷ, 2020ರಲ್ಲಿ 2.64 ಲಕ್ಷ ಜನ ಸತ್ತಿದ್ದರು. 2021ರಲ್ಲಿ 4,26,790 ಜನ ಸತ್ತಿದ್ದಾರೆ. ಅಂದರೆ, 1.62 ಲಕ್ಷ ಜನ ಹೆಚ್ಚುವರಿ ಸತ್ತಿದ್ದಾರೆ. ಈ 1.62 ಲಕ್ಷ ಜನ ಹೇಗೆ ಸತ್ತಿದ್ದಾರೆ? ಸುನಾಮಿ, ಭೂಕಂಪ, ಚಂಡಮಾರುತ ಬಂದಿತ್ತೇ. ಕಾಲರಾ, ಪ್ಲೇಗ್‌ನಂಥ ಕಾಯಿಲೆ ಬಂದಿತ್ತೇ ಎಂದು ಪ್ರಶ್ನಿಸಿದರು.

ಈ ಅಂಕಿ ಅಂಶಗಳು ಕೇವಲ ಆಸ್ಪತ್ರೆಗೆ ದಾಖಲಾಗಿ ಮೃತಪಟ್ಟವರ ಸಂಖ್ಯೆಯಾದರೆ, ಆಸ್ಪತ್ರೆಗೆ ದಾಖಲಾಗದೇ ಮನೆಯಲ್ಲಿ ಮೃತಪಟ್ಟವರ ಸಂಖ್ಯೆ ಬೇರೆಯಾಗಿದೆ ಎಂದೂ ಹೇಳಿದರು.

See also  ಕನ್ನಡ ನಿರ್ಲಕ್ಷ್ಯ ಮಾಡಿದ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರಿಗೆ ನೋಟಿಸ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು