NewsKarnataka
Sunday, September 26 2021

ಬೆಂಗಳೂರು

ರಾಜ್ಯದಲ್ಲಿ ಕೊರೋನಾ ಸಂಖ್ಯೆ ಇಳಿಕೆ

coivd 19

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಕೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 559 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,62,967ಕ್ಕೆ ಏರಿಕೆಯಾಗಿದೆ.

ಮಹಾಮಾರಿಗೆ ಇಂದು 12 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,529ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ನಿನ್ನೆ 231 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,41,870ಕ್ಕೆ ಏರಿಕೆಯಾಗಿದೆ. ನಿನ್ನೆ ನಗರದಲ್ಲಿ 4 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ  ನಿನ್ನೆ 1,034 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,09,656ಕ್ಕೆ ಏರಿಕೆಯಾಗಿದೆ. ಇನ್ನು15,754 ಸಕ್ರೀಯ ಪ್ರಕರಣಗಳಿವೆ. ರಾಜ್ಯಾದ್ಯಂತ ಇಂದು 1,05,645 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 559 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.52ಕ್ಕೆ ಇಳಿದಿದೆ. ರಾಜ್ಯದ ಮೂರು ಜಿಲ್ಲೆಗ-ಬಾಗಲಕೋಟೆ, ಗದಗ, ರಾಮನಗರಗಳಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿದೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!