News Kannada
Friday, January 27 2023

ಬೆಂಗಳೂರು

ಅಕ್ರಮ ಗಣಿಗಾರಿಕೆ, ಲೋಕಯುಕ್ತಗೆ ಹೈಕೋರ್ಟ್ ಆದೇಶ

Photo Credit :
ಬೆಂಗಳೂರು: ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಗುಂಡೇಹಳ್ಳಿಯ 36 ಎಕರೆ ಗೋಮಾಳ ಜಮೀನಿನಲ್ಲಿ 9 ಸಾವಿರ ಗಿಡ, ಮರಗಳ ಅಕ್ರಮ ಗಣಿಗಾರಿಕೆಗೆ ನಾಶಪಡಿಸಿದ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಿ ಹೈಕೋರ್ಟ್ ಗುರುವಾರ ಆದೇಶಿಸಿದೆ.

ಮಾಲೂರು ನಿವಾಸಿಗಳಾದ ರವೀಂದ್ರ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಸಿಜೆ ಸತೀಶ್​​​ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಪೀಠ ತನ್ನ ಆದೇಶದಲ್ಲಿ, ಅರಣ್ಯ ಇಲಾಖೆಯು ಸರ್ಕಾರದ ಹಣದಲ್ಲಿ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಗುಂಡೇಹಳ್ಳಿಯ ಸರ್ವೇ ನಂಬರ್ 66ರಲ್ಲಿನ 36 ಎಕರೆ 2 ಗುಂಟೆ ಗೋಮಾಳ ಜಮೀನಿನಲ್ಲಿ 1995ರಲ್ಲಿ ಒಟ್ಟು 9,500 ಗಿಡಗಳನ್ನು ನೆಟ್ಟಿತ್ತು.

ನಂತರ ನಿರ್ವಹಣೆಗಾಗಿ ಬನಹಳ್ಳಿ ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಿತ್ತು. ಆದರೆ, ಈ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿ ಎಲ್ಲ ಗಿಡಗಳನ್ನು ನಾಶಪಡಿಸಲಾಗಿದೆ. ಇದರಲ್ಲಿ ಗ್ರಾಮ ಪಂಚಾಯ್ತಿ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ಆದರೆ, ಬನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ, ಅರಣ್ಯ ಪ್ರದೇಶವನ್ನು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಿಲ್ಲ. ಆ ಜಾಗಕ್ಕೂ ಗ್ರಾಮ ಪಂಚಾಯ್ತಿಗೂ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ.

ಇದೇ ವೇಳೆ, ಸರ್ಕಾರ ವ್ಯತಿರಿಕ್ತ ಹೇಳಿಕೆ ದಾಖಲಿಸಿದ್ದು, ಜಾಗದ ನಿರ್ವಹಣೆಯನ್ನು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಿದ್ದು, ಈ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದವರ ವಿರುದ್ಧ ಕ್ರಮ ಕೈಗೊಂಡಿದ್ದಾಗಿ ತಿಳಿಸಿದೆ. ಆದ್ದರಿಂದ ಈ ಕುರಿತು ಲೋಕಾಯುಕ್ತ ತನಿಖೆ ಆದೇಶಿಸುವುದು ಸೂಕ್ತ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಅಲ್ಲದೇ, ಪ್ರಕರಣ ಕುರಿತು ಲೋಕಾಯುಕ್ತ ಸಂಸ್ಥೆಯು ತನಿಖೆ ನಡೆಸಬೇಕು ಹಾಗೂ ತನಿಖೆಯನ್ನು ಆರು ತಿಂಗಳಲ್ಲಿ ಪೂರ್ಣಗೊಳಿಸಬೇಕು. ಈ ಜಾಗದಲ್ಲಿ ಅರಣ್ಯ ಇಲಾಖೆಯು ಮತ್ತೆ ಆರು ತಿಂಗಳ ಒಳಗೆ ಗಿಡಗಳನ್ನು ನೆಡಬೇಕು. ಅಕ್ರಮ ಗಣಿಗಾರಿಕೆಯಿಂದ ಮತ್ತೆ ಗಿಡಗಳನ್ನು ನಾಶವಾಗದಂತೆ ನೋಡಿಕೊಳ್ಳಬೇಕು ಎಂದು ಪೀಠ ನಿರ್ದೇಶಿಸಿದೆ.

ಇದೇ ವೇಳೆ ಕೋಲಾರ ಜಿಲ್ಲೆಯ ಅರಣ್ಯ ಉಪ ಸಂರಕ್ಷಣಾಧಿಕಾರಿ ವೆಂಕಟೇಶ್ ಅವರು ಖುದ್ದಾಗಿ ಗಿಡಗಳನ್ನು ನೆಡುವ ಕಾರ್ಯದ ಮೇಲ್ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಅನುಪಾಲನಾ ವರದಿ ಸಲ್ಲಿಸಬೇಕು. ಅದಕ್ಕಾಗಿ 6 ತಿಂಗಳ ಕಾಲ ವೆಂಕಟೇಶ್ ಅವರನ್ನು ಹಾಲಿ ಹುದ್ದೆಯಿಂದ ವರ್ಗಾವಣೆ ಮಾಡಬಾರದು ಎಂದು ಸರ್ಕಾರಕ್ಕೆ ಆದೇಶಿಸಿದೆ.

See also  ದೀಪಾವಳಿಗೆ ಹೊಸ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ: ಹಸಿರು ಪಟಾಕಿಗೆ ಮಾತ್ರ ಅವಕಾಶ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು