NewsKarnataka
Wednesday, January 19 2022

ಬೆಂಗಳೂರು

ಕೊಡವರಿಗೆ ಬಂದೂಕು ಪರವಾನಿಗಿ ರಿಯಾಯಿತಿ : ಹೈಕೋರ್ಟ್‌ ಆದೇಶ

ಬೆಂಗಳೂರು: ಬಂದೂಕು ಪರವಾನಗಿ ಪಡೆಯುವುದರಿಂದ ಕೊಡವರು ಮತ್ತು ಜುಮ್ಮಾಬಾಣೆ ಭೂಮಿ ಹೊಂದಿರುವವರಿಗೆ  ಕೇಂದ್ರ ಸರ್ಕಾರ ವಿನಾಯಿತಿ ನೀಡಿತ್ತು. ಈ ಆದೇಶವನ್ನು  ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಂತೆ ಮಡಿಕೇರಿಯ ಗಾಳಿಬೀಡು ನಿವಾಸಿ, ನಿವೃತ್ತ ಸೇನಾಧಿಕಾರಿ ವೈ.ಕೆ.ಚೇತನ್‌ ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಸ್‌.ಸಿ. ಶರ್ಮಾ ನೇತೃತ್ವದ ವಿಭಾಗೀಯ ಪೀಠ ಬುಧವಾರ ಪ್ರಕಟಿಸಿತು. ಇದೇ ವೇಳೆ ಬಂದೂಕು ಪರವಾನಗಿ ವಿನಾಯಿತಿ ನೀಡಿ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ 2019 ಅ.29ರಂದು ಹೊರಡಿಸಿರುವ ಅಧಿಸೂಚನೆಯನ್ನು ಎತ್ತಿಹಿಡಿದಿದೆ.

ಕೊಡವರನ್ನು 1890ರಿಂದ ಮಾರ್ಷಲ್‌ ಜನಾಂಗದವರೆಂದು ಪರಿಗಣಿಸಲಾಗಿದೆ. ಆಗಿನಿಂದಲೂ ಬಂದೂಕು ಪರವಾನಗಿ ಪಡೆಯುವುದರಿಂದ ವಿನಾಯಿತಿ ನೀಡಲಾಗಿದೆ. ಶಸ್ತ್ರಾಸ್ತ ಕಾಯ್ದೆ-1959ರ ಸೆಕ್ಷನ್‌ 41 ಅನುಸಾರ ಕೊಡವರಿಗೆ ಹಾಗೂ ಜಮ್ಮಾ ಬಾಣೆ ಭೂಮಿ ಹೊಂದಿರುವವರಿಗೆ 10 ವರ್ಷಗಳ ಅವಧಿಗೆ ಬಂದೂಕು ಪರವಾನಗಿ ವಿನಾಯಿತಿ ನೀಡಿ ಕೇಂದ್ರ ಸರ್ಕಾರ 2019ರ ಅ.29ರಂದು ಅಧಿಸೂಚನೆ ಹೊರಡಿಸಿದೆ. ಅನೇಕ ಷರತ್ತು ವಿಧಿಸಿಯೇ ವಿನಾಯಿತಿ ನೀಡಲಾಗಿದೆ. ಆದ್ದರಿಂದ, ಕೇಂದ್ರ ಸರ್ಕಾರದ ಅಧಿಸೂಚನೆಯಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸುವ ಅಗತ್ಯ ಕಂಡುಬರುತ್ತಿಲ್ಲ ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.