NewsKarnataka
Wednesday, November 24 2021

ಬೆಂಗಳೂರು

ಧಾರ್ಮಿಕ ಕಟ್ಟಡಗಳ ಸಂರಕ್ಷಣಾ ಕಾಯ್ದೆ-2021 ಜಾರಿಗೆ

ಬೆಂಗಳೂರು : ಕರ್ನಾಟಕ ಧಾರ್ಮಿಕ ಕಟ್ಟಡಗಳ (ಸಂರಕ್ಷಣೆ) ಕಾಯ್ದೆ-2021 ಮಸೂದೆಗೆ ರಾಜ್ಯಪಾಲ ಥಾವರ್​ ಚಂದ್‌ ಗೆಹ್ಲೋಟ್​​​ ಅಂಕಿತ ಹಾಕಿದ್ದಾರೆ. ಈ ಮೂಲಕ ಧಾರ್ಮಿಕ ಕಟ್ಟಡಗಳ ಸಂರಕ್ಷಣಾ ಕಾಯ್ದೆ-2021 ಜಾರಿಗೆ ಬಂದಿದೆ. ರಾಜ್ಯದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನು, ನ್ಯಾಯಾಲಯ, ನ್ಯಾಯಮಂಡಳಿ, ಪ್ರಾಧಿಕಾರದ ಯಾವುದೇ ತೀರ್ಪು ಅಥವಾ ಆದೇಶ ಇದ್ದರೂ ಕಾಯ್ದೆ ಜಾರಿಯಾದ ದಿನದವರೆಗೆ ಅಸ್ತಿತ್ವದಲಿರುವ ಧಾರ್ಮಿಕ ಕಟ್ಟಡಗಳನ್ನು (ದೇವಸ್ಥಾನ, ಚರ್ಚ್, ಮಸೀದಿ, ಗುರುದ್ವಾರ, ಬೌದ್ಧ ವಿಹಾರ, ಮಜರ್ ಇತರೆ) ಸಂರಕ್ಷಿಸಲು ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಸರ್ಕಾರ ಅಥವಾ ಯಾವುದೇ ಸ್ಥಳೀಯ ಪ್ರಾಧಿಕಾರವು ಭವಿಷ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಧಾರ್ಮಿಕ ಕಟ್ಟಡ ನಿರ್ಮಾಣಕ್ಕೆ ಸೂಕ್ತ ಪರವಾನಗಿ ಇಲ್ಲದೆ ಅವಕಾಶ ನೀಡುವಂತೆ ಇಲ್ಲ. ಆದರೆ ಕಾನೂನು ಹಾಗೂ ಸರ್ಕಾರ ಆಗಾಗ ವಿಧಿಸುವ ಷರತ್ತುಗಳಿಗೆ ಒಳಪಟ್ಟಂತೆ ಸಂರಕ್ಷಿತ ಕಟ್ಟಡಗಳಲ್ಲಿ ಧಾರ್ಮಿಕ ಚಟುವಟಿಕೆ ನಡೆಸಲು ಜಿಲ್ಲಾಡಳಿತ ಅವಕಾಶ ಕಲ್ಪಿಸಬಹುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!