News Kannada
Wednesday, October 05 2022

ಬೆಂಗಳೂರು

ಈ ವರ್ಷ ಒಂದೇ ಜತೆ ಸಮವಸ್ತ್ರ..? - 1 min read

Photo Credit :

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳು ಆರಂಭವಾಗಿ ಮಕ್ಕಳ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡಿದೆ. ನವೆಂಬರ್ 8 ರಿಂದ ಪೂರ್ಣಪ್ರಮಾಣದಲ್ಲಿ ಶಾಲೆಗಳು ನಡೆಯಲಿದೆ.

ಪ್ರಾಥಮಿಕ, ಪ್ರೌಢಶಾಲೆ ಸೋಮವಾರದಿಂದ ಪೂರ್ಣ ಪ್ರಮಾಣದಲ್ಲಿ ನಡೆಯಲಿದ್ದು, ವಿದ್ಯಾರ್ಥಿಗಳು ಶೈಕ್ಷಣಿಕ ಸಾಲಿನಲ್ಲಿ ಒಂದೇ ಜತೆ ಸಮವಸ್ತ್ರದಲ್ಲಿ ವರ್ಷವನ್ನು ಕಳೆಯುವ ಪರಿಸ್ಥಿತಿ ಎದುರಾಗಿದೆ.ಎರಡನೇ ಜೊತೆ ಸಮವಸ್ತ್ರ ನೀಡಲು ಅನುದಾನ ಬಿಡುಗಡೆಯಾಗದ ಕಾರಣ ವಿದ್ಯಾರ್ಥಿಗಳಿಗೆ ಒಂದೇ ಜೊತೆ ಸಮವಸ್ತ್ರವೇ ಗತಿಯಾಗಿದೆ. ಸಮವಸ್ತ್ರ ಖರೀದಿಗೆ ಕೇಂದ್ರ ಸರ್ಕಾರ ಶೇಕಡ 60 ಮತ್ತು ರಾಜ್ಯ ಸರ್ಕಾರ ಶೇಕಡ 40 ರಷ್ಟು ಅನುದಾನ ನೀಡುತ್ತಿದೆ. ಮೊದಲ ಜತೆ ಸಮವಸ್ತ್ರ ನೀಡಿದ ನಂತರ ಶಿಕ್ಷಣ ಇಲಾಖೆ ಎರಡನೇ ಜೊತೆ ಸಮವಸ್ತ್ರಕ್ಕೆ ಅನುದಾನ ನೀಡುವಂತೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಿದೆ.

ಎರಡು ವರ್ಷಗಳ ಹಿಂದಿನ ಸಮವಸ್ತ್ರ ಖರೀದಿಗೆ ಬಾಕಿ ಇದ್ದ ಹಣವನ್ನು ಸಮಗ್ರ ಶಿಕ್ಷಣ ಇಲಾಖೆ ಅಕ್ಟೋಬರ್ ಮೊದಲ ವಾರದಲ್ಲಿ ಬಿಡುಗಡೆ ಮಾಡಿದೆ. ಕೊರೋನಾ ಕಾರಣದಿಂದ ಶಾಲೆಗಳು ವಿಳಂಬವಾದ ಸಮವಸ್ತ್ರ ನೀಡಿಕೆ ವಿಳಂಬವಾಗಿದೆ. ಈಗಾಗಲೇ ಶಿಕ್ಷಣ ಇಲಾಖೆಯಿಂದ ಮೊದಲ ಜತೆ ಸಮವಸ್ತ್ರ ನೀಡಲು ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.

See also  ಸರ್ಕಾರಿ ಶಾಲೆ ನೀರಿನ ಟ್ಯಾಂಕ್ ಗೆ ವಿಷಕಾರಿ ರಸಾಯನಿಕ ಬೆರೆಸಿದ ಪಾಪಿಗಳು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 5 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು