News Kannada
Thursday, September 29 2022

ಬೆಂಗಳೂರು

ನ. 11ರಿಂದ 14ರ ವರೆಗೆ ಹೆಬ್ಬಾಳದ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ಮೇಳ - 1 min read

Photo Credit :

ಬೆಂಗಳೂರು: ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ನೇತೃತ್ವದಲ್ಲಿ ನ. 11ರಿಂದ 14ರ ವರೆಗೆ ಹೆಬ್ಬಾಳದ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿ.ಕೆ.ವಿ.ಕೆ.)ದಲ್ಲಿ ಕೃಷಿ ಮೇಳ 2021 ಆಯೋಜಿಸಲಾಗಿದೆ.

ಕೃಷಿ, ತೋಟಗಾರಿಕೆ, ರೇಷ್ಮೆ, ಜಲಾನಯನ ಅಭಿವೃದ್ಧಿ, ಅರಣ್ಯ, ಪಶುಸಂಗೋಪನೆ ಮೀನುಗಾರಿಕೆ, ಕೃಷಿ ಮಾರುಕಟ್ಟೆ, ಗ್ರಾಮೀಣಾಭಿವೃದ್ಧಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಡೆಯುವ ಈ ಕೃಷಿ ಮೇಳದಲ್ಲಿ ರೈತರ ಆದಾಯ ದ್ವಿಗುಣಗೊಳಿಸುವಿಕೆಗೆ ಕೃಷಿ ತಾಂತ್ರಿಕತೆಗಳು ಪ್ರಮುಖ ವಿಷಯವಾಗಿದೆ.

ಈ ಕೃಷಿ ಮೇಳದಲ್ಲಿ 10 ಹೊಸ ತಳಿಗಳು ಹಾಗೂ 28 ತಂತ್ರಜ್ಞಾನಗಳ ಬಿಡುಗಡೆ ಮಾಡಲಾಗುತ್ತದೆ. ಕೃಷಿ ಸಾಧಕರಿಗೆ ಪುರಸ್ಕಾರ ಮಾಡಲಾಗುತ್ತದೆ. ಕೃಷಿ ತಂತ್ರಜ್ಞಾನಗಳ ಪ್ರಾತ್ಯಕ್ಷಿಕೆಗಳು ಇರುತ್ತವೆ. ರೈತರಿಂದ ರೈತರಿಗಾಗಿ ಚರ್ಚಾ ಗೋಷ್ಠಿ, ತೋಟಗಾರಿಕೆ ಬೆಳೆಗಳ ಮತ್ತು ನಿಖರ ಕೃಷಿ ಪ್ರಾತ್ಯಕ್ಷಿಕೆ, ಸಾವಯವ ಕೃಷಿ ಪದ್ಧತಿಗಳು, ಸುಧಾರಿತ ಕೃಷಿ ಯಂತ್ರೋಪಕರಣಗಳ ಪ್ರದರ್ಶನ, ಕೃಷಿ ಪರಿಕರಗಳ ಹಾಗೂ ಪ್ರಕಟಣೆಗಳ ಮಾರಾಟ ವ್ಯವಸ್ಥೆ ಇತ್ಯಾದಿಗಳು ಇರುತ್ತವೆ.

ಕೃಷಿ ಮೇಳದಲ್ಲಿ 450ಕ್ಕೂ ಅಧಿಕ ಮಳಿಗೆಗಳು ಇರುತ್ತವೆ. ನಾಲ್ಕು ದಿನಗಳ ಕಾಲ ನಡೆಯುವ ಈ ಮೇಳದಲ್ಲಿ ನಿತ್ಯ 10-15 ಸಾವಿರ ಮಂದಿ ಭೇಟಿ ನೀಡುವ ನಿರೀಕ್ಷೆ ಇದೆ. ಮೇಕೆ, ಹೋತ, ಹೋರಿಗಳ ಪ್ರದರ್ಶನವೂ ಇರುತ್ತದೆ. ರೈತರ ಕೃಷಿ ಸಮಸ್ಯೆಗಳಿಗೆ ಭೌತಿಕವಾಗಿ ಹಾಗೂ ಝೂಮ್ ಸಭೆಯ ಮೂಲಕ ತಜ್ಞರಿಂದ ವೈಜ್ಞಾನಿಕ ಸಲಹೆ ನೀಡಲಾಗುತ್ತದೆ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್. ರಾಜೇಂದ್ರ ಪ್ರಸಾದ್ ತಿಳಿಸಿದ್ದಾರೆ.

See also  ಬೆಂಗಳೂರು: ಒಂದೇ ದಿನ 93,524 ಗಣೇಶ ಮೂರ್ತಿ ವಿಸರ್ಜನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು