ಬೆಂಗಳೂರು :ರಾಜ್ಯದಲ್ಲಿ ಈವರೆಗೆ 4.51 ಕೋಟಿ ಮಂದಿಗೆ ಮೊದಲ ಡೋಸ್ ನೀಡಲಾಗಿದೆ. 3.03 ಕೋಟಿ 2 ನೇ ಡೋಸ್ ನೀಡಲಾಗಿದೆ. ಒಟ್ಟು ಶೇ. 62 ರಷ್ಟು 2 ನೇ ಡೋಸ್ ನೀಡಲಾಗಿದೆ . ನಿನ್ನೆ ಒಂದೇ ದಿನ 9.5 ಲಕ್ಷ ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್ ಅವರು, ಕರ್ನಾಟಕದಲ್ಲಿ ನಿನ್ನೆ ಒಂದೇ ದಿನ 9.5 ಲಕ್ಷ ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಈ ಮೂಲಕ ರಾಜ್ಯದಲ್ಲಿ ಈವರೆಗೆ ಒಟ್ಟು 7.54 ಕೋಟಿ ಡೋಸ್ ನೀಡಲಾಗಿದೆ ಎಂದು ತಿಳಿಸಿದ್ದಾರೆ.
.