ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಹಾಸನ, ಚಾಮರಾಜನಗರ, ತುಮಕೂರು, ರಾಮನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 4 ದಿನ ಮಳೆಯಾಗಲಿದೆ ಎಂದು ಮಾಹಿತಿ ನೀಡಿದ್ದು, ಬೆಂಗಳೂರಿನಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.