ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 211 ಜನರಿಗೆ ಸೋಂಕು ತಗುಲಿದ್ದು, ನಾಲ್ವರು ಮೃತಪಟ್ಟಿದ್ದಾರೆ. 133 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ರಾಜ್ಯದಲ್ಲಿ ಇಂದು ಹೊಸದಾಗಿ 373 ಜನರಿಗೆ ಸೋಂಕು ತಗುಲಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,99,471 ಕ್ಕೆ ಏರಿಕೆಯಾಗಿದೆ. ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 38,253 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 292 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 29,53,857 ಜನ ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.31 ರಷ್ಟಿದೆ. ರಾಜ್ಯದಲ್ಲಿ 7332 ಸಕ್ರಿಯ ಪ್ರಕರಣಗಳಿವೆ.
ಬಳ್ಳಾರಿ, ಬೀದರ್, ಚಿತ್ರದುರ್ಗ, ದಾವಣಗೆರೆ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಮನಗರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ.
ಬೆಂಗಳೂರು 211, ದಕ್ಷಿಣಕನ್ನಡ 11, ಹಾಸನ 12, ಕೊಡಗು 21, ಮೈಸೂರು 18, ಶಿವಮೊಗ್ಗ 30, ತುಮಕೂರು 11, ಹೊಸ ಪ್ರಕರಣ ವರದಿಯಾಗಿದೆ.
ಬೆಂಗಳೂರು ನಗರ 4 ಜನ ಸೋಂಕಿತರು ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಯಾವುದೇ ಕೊರೋನಾ ಸಾವಿನ ವರದಿಯಾಗಿಲ್ಲ.