ಬೆಂಗಳೂರು: ವಾಯುಭಾರ ಕುಸಿತದಿಂದ ಉಂಟಾದಂತ ಹವಾಮಾನ ವೈಪರಿತ್ಯದಿಂದಾಗಿ ಇಂದಿನಿಂದ ಕರ್ನಾಟಕ ಸೇರಿದಂತೆ ಆಂಧ್ರಪ್ರದೇಶ, ಕೇರಳ, ಅಂಡಮಾನ್ ಮತ್ತು ನಿಕೋಬರ್ ದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂಬುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದೇ ವಾಯುಭಾರ ಕುಸಿತದ ಕಾರಣದಿಂದಾಗಿ ಈಗಾಗಲೇ ಬೆಂಗಳೂರಿನಲ್ಲಿ ನಿನ್ನೆಯಿಂದ ಜಿಟಿ ಜಿಟಿ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ರಸ್ತೆ ಸಂಚಾರದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ, ವಾಹಸ ಸವಾರರು ಹೈರಾಣಾಗುವಂತೆ ಆಗಿತ್ತು. ಇದೀಗ ಮತ್ತೆ ಬೆಂಗಳೂರು ಸೇರಿದಂತೆ ಇಂದಿನಿಂದ 4 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಈ ಬಗ್ಗೆ ಐಎಂಡಿ ಮಾಹಿತಿ ನೀಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮದಿಂದ ಇಂದಿನಿಂದ ಕರ್ನಾಟಕ ತಮಿಳುನಾಡು ಕೇರಳ ಸೇರಿದಂತೆ ಅನೇಕರ ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.
ಇಂದಿನಿಂದ ನಾಲ್ಕು ದಿನ ಬೆಂಗಳೂರು ಸೇರಿದಂತೆ ಚಿಕ್ಕಮಗಳೂರು, ಹಾಸನ, ರಾಮನಗರ, ಮೈಸೂರು, ತುಮಕೂರು ಮಳೆಯಲಾಗಿದೆ. ಹಾವೇರಿ, ಚಾಮರಾಜನಗರ, ಮಂಡ್ಯ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಕೊಡಗು, ಧಾರವಾಡ, ಗದಗ, ಹಾವೇರಿ, ಬಳ್ಳಾರಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.