ಕಾರವಾರ:ಉತ್ತರ ಕನ್ನಡ ವಿಧಾನ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ನ ಭೀಮಣ್ಣ ನಾಯ್ಕ ವಿರುದ್ಧ 183 ಮತಗಳಿಂದ ಬಿಜೆಪಿ ಅಭ್ಯರ್ಥಿ ಉಳ್ವೇಕರ್ ವಿಜಯ ಸಾಧಿಸಿದ್ದಾರೆ. ಗಣಪತಿ ಉಳ್ವೇಕರ್ 1514 ಮತಗಳನ್ನು ಪಡೆದಿದ್ದರೇ ಕಾಂಗ್ರೆಸ್ ನ ಭೀಮಣ್ಣ ನಾಯ್ಕ ಅವರಿಗೆ 1331 ಮತಗಳು ಬಂದಿದೆ. ಕೊನೆವರೆಗೂ ಕಾಂಗ್ರೆಸ್ ಬಿಜೆಪಿ ನಡುವೆ ಏರ್ಪಟ್ಟಿದ್ದ ನೇರಾ ನೇರ ಹಣಾಹಣಿಯಲ್ಲಿ ಕೊನೆಗೂ ಬಿಜೆಪಿಯ ಗಣಪತಿ ಉಳ್ವೇಕರ್ ಗೆಲುವಿನ ನಗೆ ಬೀರಿದ್ದಾರೆ. ಕಳೆದ ಭಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಸೋಲು ಕಂಡಿದ್ದ ಉಳ್ವೇಕರ್ ಈ ಭಾರಿ ಗೆಲುವು ಕಂಡಿದ್ದಾರೆ
ಬಿಜೆಪಿಯ ಗಣಪತಿ ಉಳ್ವೇಕರ್ ಗೆ ಗೆಲುವು
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.