ಬೆಂಗಳೂರು: ಕೊರೋನಾ ಕಾರಣದಿಂದಾಗಿ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದಂತ ಮಾವು ಮೇಳಕ್ಕೆ ಮತ್ತೆ ಜೀವ ಬಂಧಿದೆ. ಇದೇ ಮೇ.26ರಿಂದ ನಗರದ ಲಾಲ್ ಬಾಗ್ ಮತ್ತು ಕಬ್ಬನ್ ಉದ್ಯಾನವನದಲ್ಲಿ ಮಾವು ಮೇಳವನ್ನು ಆಯೋಜಿಸಲಾಗಿದೆ.
ಈ ಕುರಿತು ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಅಧ್ಯಕ್ಷ ಕೆ.ವಿ ನಾಗರಾಜ್, ವ್ಯವಸ್ಥಾಪಕ ನಿರ್ದೇಶಕ ಸಿ.ಜಿ ನಾಗರಾಜ್ ಮತ್ತು ರಾಜ್ಯ ತೋಟಗಾರಿಕೆ ಇಲಾಖೆ ನಿರ್ದೇಶಕ ನಾಗೇಂದ್ರ ಪ್ರಸಾದ್ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ, ಈ ತೀರ್ಮಾನ ಕೈಗೊಳ್ಳಲಾಗಿದೆ.
ಕಳೆದ ಮೂರು ವರ್ಷಗಳ ಹಿಂದೆ ಅಂಚೆ ಮೂಲಕ ಖರೀದಿ ಯೋಜನೆ ಜಾರಿಗೆ ತರಲಾಗಿತ್ತು. ಈ ವರ್ಷವೂ ಮೇ.16ರಿಂದ ಬುಕ್ಕಿಂಗ್ ಮಾಡೋದಕ್ಕೆ ಅವಕಾಶ ನೀಡಲಾಗಿದೆ. ಗ್ರಾಹಕರು ksmdmcl.karnataka.gov.in ಜಾಲತಾಣಕ್ಕೆ ಭೇಟಿ ನೀಡಿ ಅಂಚೆ ಮೂಲಕ ಮಾವು ತರಿಸಿಕೊಳ್ಳಲು ಬುಕ್ಕಿಂಗ್ ಮಾಡಬಹುದಾಗಿದೆ.