News Kannada
Tuesday, February 07 2023

ಬೆಂಗಳೂರು

ಮತಾಂತರ ನಿಷೇಧಕ್ಕೆ ಸುಗ್ರೀವಾಜ್ಞೆ ಹೊರಡಿಸಿದ ರಾಜ್ಯ ಸರ್ಕಾರ

Photo Credit :

ಬೆಂಗಳೂರು: ಹಿಜಾಬ್ ವಿವಾದ, ಜಾತ್ರೆ, ಉತ್ಸವಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ, ಆಜಾನ್- ಭಜನೆ ಸಂಘರ್ಷದ ಬೆನ್ನಲ್ಲೇ, ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಮಸೂದೆ’ಯನ್ನು ಸುಗ್ರೀವಾಜ್ಞೆ ಮೂಲಕ ಕಾಯ್ದೆಯಾಗಿ ಜಾರಿಗೊಳಿಸಲು ರಾಜ್ಯ ಸರ್ಕಾರ‌ ಮುಂದಾಗಿದೆ.

ಸುಗ್ರೀವಾಜ್ಞೆ ಹೊರಡಿಸಲು ಯಾವುದೇ ಕಾನೂನು ತೊಡಕು ಇಲ್ಲ’ ಎಂದು ಕಾನೂನು‌ ಮತ್ತು ಸಂಸದೀಯ ಇಲಾಖೆ ಅಭಿಪ್ರಾಯ ನೀಡಿದೆ. ಹೀಗಾಗಿ, ಗುರುವಾರ (ಮೇ 12) ನಡೆಯಲಿರುವ ಸಚಿವ ಸಂಪುಟ ಸಭೆಗೆ ಪ್ರಸ್ತಾವ ಮಂಡಿಸಲು ಗೃಹ ಇಲಾಖೆ ಟಿಪ್ಪಣಿ ಸಿದ್ಧಪಡಿಸಿದೆ ಎಂದು ಮೂಲಗಳು ತಿಳಿಸಿವೆ.

ಬೆಳಗಾವಿಯಲ್ಲಿ ಕಳೆದ ಡಿಸೆಂಬರ್‌ ನಲ್ಲಿ ನಡೆದ ವಿಧಾನಮಂಡಲ ಅಧಿವೇಶನದ ವೇಳೆ ವಿಧಾನಸಭೆಯಲ್ಲಿ (2021ರ ಡಿಸೆಂಬರ್ 23) ಮತಾಂತರ ನಿಷೇಧ ಮಸೂದೆಯನ್ನು ಮಂಡಿಸಿ ಸರ್ಕಾರ ಅಂಗೀಕಾರ ಪಡೆದಿತ್ತು. ಆದರೆ, ಕಾಂಗ್ರೆಸ್, ಜೆಡಿಎಸ್ ಸದಸ್ಯರ ತೀವ್ರ ವಿರೋಧ ಮತ್ತು ಅಗತ್ಯ ಬಲ ಇಲ್ಲದೇ ಇದ್ದ ಕಾರಣ ವಿಧಾನ ಪರಿಷತ್‌ನಲ್ಲಿ ಮಸೂದೆ ಮಂಡಿಸಿರಲಿಲ್ಲ. ಇದೀಗ, ವಿಧಾನಸಭೆಯಲ್ಲಿ ಮಂಡಿಸಿದ್ದ ಮಸೂದೆಯನ್ನೇ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಸರ್ಕಾರ ತೀರ್ಮಾನಿಸಿದೆ.

‘ಕಾಯ್ದೆ ಜಾರಿ ವಿಳಂಬವಾಗಬಾರದು ಎನ್ನುವ ಕಾರಣಕ್ಕೆ ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರ ನಿರ್ಧರಿಸಿದೆ. ಸಚಿವ ಸಂಪುಟದಲ್ಲಿ ಈ ಬಗ್ಗೆ ತೀರ್ಮಾನ ಕೈಗೊಂಡು ಅನುಮೋದನೆಗಾಗಿ ರಾಜ್ಯಪಾಲರಿಗೆ ಕಳುಹಿಸಲಾಗುವುದು.

ಪ್ರಸ್ತಾವಿತ ಕಾಯ್ದೆಯ ಪ್ರಮುಖ ಅಂಶ

ಆಮಿಷ, ಪ್ರಲೋಭನೆ, ಉದ್ಯೋಗ, ಉಚಿತ ಶಿಕ್ಷಣ, ನಗದು, ಮದುವೆ ಆಗುವುದಾಗಿ ವಾಗ್ದಾನ, ಉತ್ತಮ ಜೀವನ ಶೈಲಿಯ ಭರವಸೆ, ದೈವಿಕ ಸಂತೋಷ, ಒತ್ತಾಯ, ವಂಚನೆ ಮೂಲಕ ಮತಾಂತರ ಮಾಡುವುದನ್ನು ನಿಷೇಧಿಸುವ ಅಂಶ ಈ ಕಾಯ್ದೆಯಲ್ಲಿದೆ. ಯಾವುದೇ ಒಂದು ಧರ್ಮದ ಆಚರಣೆಗಳನ್ನು ಅವಹೇಳನ ಮಾಡುವುದನ್ನೂ ಆಮಿಷ ಎಂದೇ ಪರಿಗಣಿಸಲಾಗಿದೆ. ವ್ಯಕ್ತಿಯೊಬ್ಬ ಒಂದು ಧರ್ಮದಿಂದ ಮತ್ತೊಂದು ಧರ್ಮಕ್ಕೆ ಮತಾಂತರವಾದಾಗ ಮಾತ್ರ ಕಾಯ್ದೆ ಅನ್ವಯವಾಗಲಿದೆ. ಆದರೆ, ಯಾವುದೋ ಕಾರಣಕ್ಕೆ ಮತಾಂತರಗೊಂಡು, ಮರಳಿ ಮಾತೃಧರ್ಮಕ್ಕೆ ಬರುವುದಾದರೆ ಈ ಕಾಯ್ದೆ ಅನ್ವಯವಾಗುವುದಿಲ್ಲ. ಮತಾಂತರ ಮಾಡಿದರೆ ದಂಡ ಮತ್ತು ಜೈಲು ಶಿಕ್ಷೆ ವಿಧಿಸಲಾಗುತ್ತದೆ.

See also  ಹೈಕೋರ್ಟ್‌ ತೀರ್ಪುಪಾಲಿಸಿ, ವಿದ್ಯಾರ್ಥಿಗಳು ಶಾಲಾಕಾಲೇಜಿಗೆ ಹಾಜರಾಗಿ: ಬಿ.ಸಿ.ನಾಗೇಶ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು