News Kannada
Tuesday, February 07 2023

ಬೆಂಗಳೂರು

ಹಿಜಾಬ್ ಪ್ರಕರಣ: ಹೈ ಕೋರ್ಟ್ ನ್ಯಾಯಮೂರ್ತಿಗಳಿಗೆ ಬಹಿರಂಗ ಕೊಲೆ ಬೆದರಿಕೆ

Photo Credit :

ಬೆಂಗಳೂರು: ಹಿಜಾಬ್ ಪ್ರಕರಣದ ತೀರ್ಪು ನೀಡಿದ್ದ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬಹಿರಂಗ ಸಭೆಯಲ್ಲಿ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಗೆ ಬೆಂಗಳೂರಿನ ಸೆಷನ್ಸ್ ಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ.

ಪ್ರಕರಣದಲ್ಲಿ ಬಂಧಿತನಾಗಿರುವ ತಮಿಳುನಾಡಿದ ತೌಹೀದ್ ಜಮಾತ್ (ಟಿಎನ್​ಟಿಜೆ) ಸಂಘಟನೆ ಮುಖ್ಯಸ್ಥ ರಹಮತ್ -ಉಲ್ಲಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನಗರದ 67ನೇ ಸಿಟಿ ಸಿವಿಲ್ ಅಂಡ್ ಸೆಷನ್ಸ್ ಕೋರ್ಟ್ ಈ ಆದೇಶ ಮಾಡಿದೆ.

ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಹಾಕಿದ್ದು ಗಂಭೀರ ಸ್ವರೂಪದ ಅಪರಾಧವಾಗಿದೆ. ಆರೋಪಿಗಳ ಕೃತ್ಯಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಹಲವು ಸಾಕ್ಷ್ಯಗಳನ್ನು ನ್ಯಾಯಾಲಯದ ಮುಂದಿಟ್ಟಿದೆ. ಈ ಹಂತದಲ್ಲಿ ಜಾಮೀನು ನೀಡಲಾಗದು ಎಂದು ಅಭಿಪ್ರಾಯಪಟ್ಟು ಆರೋಪಿಯ ಜಾಮೀನು ಅರ್ಜಿಯನ್ನು ನ್ಯಾಯಾಧೀಶ ವಿ. ಪ್ರಕಾಶ್ ತಿರಸ್ಕರಿಸಿದ್ದಾರೆ.

ಪ್ರಕರಣದಲ್ಲಿ ಸರ್ಕಾರದ ಪರ ಬಿ.ಎಸ್ ಪಾಟೀಲ್ ವಾದ ಮಂಡಿಸಿದ್ದರು. ಶಾಲೆ – ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಸರ್ಕಾರ ಹಾಗೂ ಶಿಕ್ಷಣ ಸಂಸ್ಥೆಗಳಿಗೆ ನಿರ್ದೇಶಿಸುವಂತೆ ಕೋರಿದ್ದ ಅರ್ಜಿಯನ್ನು ಇತ್ಯರ್ಥಪಡಿಸಿದ್ದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ತ್ರಿಸದಸ್ಯ ಪೀಠ, ವಿದ್ಯಾರ್ಥಿಗಳು ಸಮವಸ್ತ್ರ ಸಂಹಿತೆ ಪಾಲಿಸಬೇಕು ಎಂದು ತೀರ್ಪು ನೀಡಿತ್ತು.

ಈ ತೀರ್ಪು ನೀಡಿದ್ದ ಮೂವರು ನ್ಯಾಯಮೂರ್ತಿಗಳಿಗೆ ಟಿಎನ್​ಟಿಜೆ ಮುಸ್ಲಿಂ ಸಂಘಟನೆ ಮುಖಂಡ ಆರ್. ರಹಮತ್ – ಉಲ್ಲಾ ತಮಿಳುನಾಡಿನ ಮಧುರೈನಲ್ಲಿ ನಡೆದಿದ್ದ ಬಹಿರಂಗ ಸಮಾವೇಶದಲ್ಲಿ ಕೊಲೆ ಬೆದರಿಕೆ ಹಾಕಿದ್ದ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿಯೂ ಹರಿದಾಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ತಮಿಳುನಾಡು ಹಾಗೂ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಕೇಸ್ ದಾಖಲಿಸಲಾಗಿದ್ದು, ಸದ್ಯ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ.

See also  ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶೇ. 50 ತೆರಿಗೆ ರಿಯಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು