News Kannada
Monday, February 06 2023

ಬೆಂಗಳೂರು

ಎಸ್ ಸಿ ಎಸ್ ಟಿ ಕುಟುಂಬದವರಿಗೆ ಅನುಕಂಪದ ನೌಕರಿ: ರಾಜ್ಯ ಸರ್ಕಾರ

Photo Credit :

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೆಲ ದಿನಗಳ ಹಿಂದಷ್ಟೇ ದೌರ್ಜನ್ಯಕ್ಕೆ ಒಳಗಾಗಿ ಮೃತಪಟ್ಟಂತ ಪರಿಶಿಷ್ಟ ಜಾತಿ, ವರ್ಗದ ವ್ಯಕ್ತಿಗಳ ಕುಟುಂಬದ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ನೌಕರಿ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಇದೀಗ ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ರಾಜ್ಯ ನಾಗರಿಕ ಸೇವಾ ( ದೌರ್ಜನ್ಯದಿಂದ ಮೃತಪಟ್ಟ ಪರಿಶಿಷ್ಟ ಜಾತಿ, ವರ್ಗಕ್ಕೆ ಸೇರಿದ ವ್ಯಕ್ತಿಗಳ ಕುಟುಂಬ ಸದಸ್ಯರಿಗೆ ಅನುಕಂಪದ ಆಧಾರದ ನೇಮಕಾತಿ ) ( ವಿಶೇಷ) ನಿಯಮಗಳು 1999ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲಾಗಿದೆ.

ಈ ತಿದ್ದುಪಡಿ ನಿಯಮದಂತೆ ದೌರ್ಜನ್ಯದಿಂದ ಮೃತಪಟ್ಟ ಪರಿಶಿಷ್ಟ ಜಾತಿ, ವರ್ಗಕ್ಕೆ ಸೇರಿದ ಮೃತ ಕುಟುಂಬಸ್ಥರಿಗೆ ಅನುಕಂಪದ ಆಧಾರದ ನೌಕರಿಯನ್ನು ನೀಡಲಾಗುತ್ತದೆ. ವ್ಯಕ್ತಿ ಮರಣ ಹೊಂದಿದ ದಿನಾಂಕದಿಂದ ಮೂರು ವರ್ಷದ ಒಳಗೆ ಹದಿನೆಂಟು ವರ್ಷಗಳನ್ನು ಪೂರೈಸಿರುವಂತ ಮತ್ತು ತದನಂತರ ಎರಡು ವರ್ಷಗಳೊಳಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು ಎಂದು ಹೇಳಿದೆ.

See also  ಜೈಲುಗಳಲ್ಲಿರುವ ಕೈದಿಗಳಿಗೆ ನವೆಂಬರ್ 1 ರಿಂದ ಜೈಲಿನಲ್ಲೇ ಶಿಕ್ಷಣ ನೀಡುವ ಸಾಕ್ಷರತಾ ಕಾರ್ಯಕ್ರಮ ಆರಂಭ : ಆರಗ ಜ್ಞಾನೇಂದ್ರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು