News Kannada
Thursday, July 07 2022

ಬೆಂಗಳೂರು

ಬೆಂಗಳೂರು: ಇಂದಿನಿಂದ ಮಾವು-ಹಲಸು ಮೇಳ - 1 min read

Photo Credit :

ಬೆಂಗಳೂರು: ಕೋವಿಡ್ ಕಾರಣಕ್ಕೆ ಎರಡು ವರ್ಷಗಳಿಂದ ನಡೆಯದೇ ಇದ್ದ ಮಾವು-ಹಲಸು ಮೇಳ ಶುಕ್ರವಾರದಿಂದ ಜೂ.13ರವರೆಗೆ ಲಾಲ್‌ಬಾಗ್‌ನಲ್ಲಿ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸಿ.ಜಿ. ನಾಗರಾಜು, ‘ಮಾವು-ಹಲಸು ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ತರಹೇವಾರಿ ಹಾಗೂ ಆರೋಗ್ಯಯುತ ಹಣ್ಣುಗಳು ಸಿಗಲಿವೆ. ಮಾವು ಬೆಳೆಗಾರರು ಬೆಳೆದ ಫಲವನ್ನು ನೇರವಾಗಿ ಗ್ರಾಹಕರಿಗೆ ತಲುಪಿಸುವ ಆಶಯ ಇದಾಗಿದೆ. ಬಾದಾಮಿ, ಮಲ್ಲಿಕಾ, ರಸಪುರಿ, ಕೇಸರ್, ಬೈಗನಪಲ್ಲಿ, ಮಲಗೋವಾ, ತೋತಾ ಪುರಿ ಸೇರಿದಂತೆ ವಿವಿಧ ತಳಿಗಳ ಮಾವು ಖರೀದಿಗೆ ಸಿಗಲಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಗುರುವಾರ ಸಂಜೆ 4.30ಕ್ಕೆ ಮೇಳವನ್ನು ಉದ್ಘಾಟಿಸಲಿದ್ದಾರೆ. ತೋಟಗಾರಿಕೆ ಸಚಿವ ಮುನಿರತ್ನ, ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಉದಯ್‌ ಬಿ. ಗರುಡಾಚಾರ್, ಅ.ದೇವೇಗೌಡ ಭಾಗವಹಿಸಲಿದ್ದಾರೆ’ ಎಂದರು.

ನಿಗಮದ ಅಧ್ಯಕ್ಷ ಕೆ.ವಿ. ನಾಗರಾಜ್ ಮಾತನಾಡಿ, ‘ಮೇಳದಲ್ಲಿ ಹಲವಾರು ಬಗೆಯ ಹಲಸಿನ ಹಣ್ಣು ಹಾಗೂ ಹಲಸಿನ ಉತ್ಪನ್ನಗಳು ಖರೀದಿಗೆ ಸಿಗಲಿವೆ. ಹಳದಿ, ಕೇಸರಿ, ಕೆಂಪು ಬಣ್ಣ ಹಾಗೂ ವೈವಿಧ್ಯಮಯ ಹಲಸು ಮತ್ತು ಹಪ್ಪಳ, ಚಿಪ್ಸ್ ಕೂಡ ಮೇಳದ ಆಕರ್ಷಣೆಯಾಗಲಿದೆ’ ಎಂದರು.

‌ರೈತರು ಹಾಗೂ ರೈತ ಉತ್ಪಾದಕ ಸಂಘಗಳಿಗೆ 108 ಮಳಿಗೆಗಳನ್ನು ವ್ಯವಸ್ಥೆ ಮಾಡಲಾಗಿದೆ. ಹಲಸು ಬೆಳೆಗಾರರಿಗೆ 16 ಹಾಗೂ ಉಪ ಉತ್ಪನ್ನಗಳ ಮಾರಾಟಗಾರರಿಗೆ 8 ಮಳಿಗೆಗಳನ್ನು ಹಂಚಿಕೆ ಮಾಡಲಾಗಿದೆ ಎಂದರು.

See also  ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು