News Kannada
Monday, October 02 2023
ಬೆಂಗಳೂರು

ಬೆಂಗಳೂರು: ಭಿಕ್ಷಾಟನೆ ನಿಷೇಧ ಕಾಯ್ದೆ  ಸಂಪೂರ್ಣವಾಗಿ ಜಾರಿಗೆ ತರಲಾಗುವುದು ಎಂದ ಶ್ರೀನಿವಾಸ ಪೂಜಾರಿ

The Ban on Begging Act will be fully implemented, says Srinivas Poojary
Photo Credit : By Author

ಬೆಂಗಳೂರು:ಭಿಕ್ಷಾಟನೆ ನಿಷೇಧ ಕಾಯ್ದೆಯನ್ನು ಸಂಪೂರ್ಣವಾಗಿ ಜಾರಿಗೆ ತರಲಾಗುವುದು ಎಂದು ಸಮಾಜ ಕಲ್ಯಾಣ ಮತ್ತು ಹಿಂದಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಭಿಕ್ಷಾಟನೆ ನಿರ್ಮೂಲನೆ ಸಂಬಂಧ ಗೃಹ ಸಚಿವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು, ಕಾರ್ಮಿಕ ಇಲಾಖೆ ಸಚಿವರು, ಕಾನೂನು ಸೇವಾ ಪ್ರಾಧಿಕಾರ,  ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಭಿಕ್ಷಾಟನೆ ಹೆಸರಿನಲ್ಲಿ ವಿವಿಧ ಕಾನೂನು ಬಾಹಿರ ಕೃತ್ಯಗಳು ನಡೆಯುವುದನ್ನು ಇಲಾಖೆ ಗುರುತಿಸಿದೆ. ವಿಶೇಷವಾಗಿ ಮಕ್ಕಳಿಗೆ  ಮತ್ತು ಬರುವ ಮದ್ದು ನೀಡಿ ಭಿಕ್ಷಾಟನೆಗೆ ಬಳಸಿಕೊಳ್ಳುವುದು, ಅಂಗವಿಕಲರನ್ನಾಗಿ ಮಾಡಿ ಭಿಕ್ಷಾಟನೆಗೆ ಬಳಸಿಕೊಳ್ಳುತ್ತಿರುವುದು ಕಂಡು ಬಂದಿದ್ದು, ಇದನ್ನು ಸಂಪೂರ್ಣವಾಗಿ ನಿಯಂತ್ರಿಸಲು ಭಿಕ್ಷಾಟನೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲಾಗುವುದು ಎಂದರು.

ಭಿಕ್ಷಾಟನೆಯಲ್ಲಿ ತೊಡಗಿದವರನ್ನು ರಕ್ಷಿಸಿ ಅವರಿಗೆ ಪುನರ್ವಸತಿ ಕಲ್ಪಿಸುವ ಸಂಬಂಧ ಹಾಗೂ ಈ ಚಟುವಟಿಕೆಯಲ್ಲಿ ಗೃಹ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆ, ಕಾರ್ಮಿಕ ಇಲಾಖೆಗಳ ಪಾತ್ರ ಹಾಗೂ ಸಹಕಾರದ ಬಗ್ಗೆ ಸಭೆಯಲ್ಲಿ ವಿಸ್ತೃತ ಚರ್ಚೆ ಮಾಡಲಾಗಿದೆ. ಭಿಕ್ಷಾಟನೆ ನಿರ್ಮೂಲನೆಗೆ ಸಂಬಂಧಿಸಿದ ಇಲಾಖೆಗಳು ಸಂಪೂರ್ಣವಾಗಿ ಸಹಕಾರ ನೀಡಲಿವೆ ಎಂದರು.

ಇಲಾಖೆ ಅಧಿಕಾರಿಗಳೊಂದಿಗೆ ಈಗಾಗಲೇ ಐದು ಬಾರಿ ಈ ಕುರಿತು ಚರ್ಚೆ ನಡೆಸಿದ್ದು, ಬೆಂಗಳೂರಿನಲ್ಲಿ 50 ರಿಂದ 70ಕಡೆಗಳಲ್ಲಿ ಭಿಕ್ಷಾಟನೆ ವ್ಯಾಪಕವಾಗಿರುವುದನ್ನು ಗುರುತಿಸಲಾಗಿದೆ. ಈಗಾಗಲೇ ಮಕ್ಕಳ ರಕ್ಷಣಾ ನಿರ್ದೇಶನಾಲಯದಿಂದ ಭಿಕ್ಷಾಟನೆಯಲ್ಲಿ ತೊಡಗಿದ್ದ 101 ಮಕ್ಕಳನ್ನು ವಶಕ್ಕೆ ಪಡೆದಿದ್ದು ಅವರಿಗೆ ಪುನರ್ವಸತಿ ಕಲ್ಪಿಸಲಾಗಿದೆ. ಅಲ್ಲದೆ ಕಾನೂನು ಸೇವಾ ಪ್ರಾಧಿಕಾರದಿಂದ 720 ಮಕ್ಕಳು ಭಿಕ್ಷಾಟನೆಯಲ್ಲಿ ತೊಡಗಿರುವ ಬಗ್ಗೆ ವರದಿ ನೀಡಿದ್ದಾರೆ. ಈ ಎಲ್ಲ ಮಾಹಿತಿಯನ್ನಾಧರಿಸಿ ಸೂಕ್ತ ಕ್ರಮ ವಹಿಸಲಾಗುವುದು ಎಂದು ಸಚಿವರು ತಿಳಿಸಿದರು.

ಬೆಂಗಳೂರಿನಲ್ಲಿ ಭಿಕ್ಷಾಟನೆ ಸಂಬಂಧ ವ್ಯಾಪಕವಾಗಿರುವುದನ್ನು ಗಮನಿಸಲಾಗಿದ್ದು ಭಿಕ್ಷಾಟನೆ ನಿಯಂತ್ರಣಕ್ಕೆ ನಿರ್ಧಾಕ್ಷಿಣ್ಯವಾಗಿ ಕ್ರಮಗಳನ್ನು ಕೈಗೊಳ್ಳಲಾಗುವುದು. ಈಗಾಗಲೆ ಬೆಂಗಳೂರಿನ ಎಂಟು ಪೊಲೀಸ್ ವಿಭಾಗಗಳಲ್ಲಿ ತಂಡಗಳನ್ನು ರಚಿಸಿ ಈ ಬಗ್ಗೆ ಕಾರ್ಯಯೋಜನೆಯನ್ನು ಸಿದ್ಧಪಡಿಸಲಾಗಿದೆ. ಮಕ್ಕಳನ್ನು ಭಿಕ್ಷಾಟನೆಗಾಗಿ ಬೀದಿಗೆ ಬಿಡುವವರ ವಿರುದ್ಧವೂ ಕೇಸು ದಾಖಲಿಸಲಾಗುವುದು ಎಂದರು.

ಅಲ್ಲದೆ ವಶಕ್ಕೆ ಪಡೆದ ಮಕ್ಕಳು ಹಾಗೂ ತಾಯಿಯರಿಗೆ ಪುನರ್ವಸತಿ ಕಲ್ಪಿಸಲು ಇಲಾಖೆಯಿಂದ ಪ್ರತ್ಯೇಕವಾಗಿ ಕಟ್ಟಡವೊಂದನ್ನು ವ್ಯವಸ್ಥೆ ಮಾಡಲಾಗುವುದು. ಇದಕ್ಕಾಗಿ ಯಾವುದೇ ಹಣಕಾಸಿನ ಕೊರತೆ ಇರುವುದಿಲ್ಲ ಎಂದರು.

ಮಕ್ಕಳ ರಕ್ಷಣಾ ನಿರ್ದೇಶನಾಲಯದಿಂದ ಈಗಾಗಲೆ ‘ ಗುರುತು‘ ಎಂಬ ಮೊಬೈಲ್ ಆಪ್ ಅನ್ನು ಬಿಡುಗಡೆ ಮಾಡಿದ್ದು ಮಕ್ಕಳು ಭಿಕ್ಷಾಟನೆಯಲ್ಲಿ ತೊಡಗಿರುವ ಬಗ್ಗೆ ಕಂಡುಬಂದಲ್ಲಿ  ಸಾರ್ವಜನಿಕರು ತಕ್ಷಣ 1098ಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದರು.

ಸಭೆಯಲ್ಲಿ ಗೃಹಸಚಿವ ಅರಗ ಜ್ಞಾನೇಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಬಸಪ್ಪ ಆಚಾರ್, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್, ಬೆಂಗಳೂರು ಮಹಾನಗರ ಪಾಲಿಕೆ  ಆಯುಕ್ತ   ಗಿರಿನಾಥ್, ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮೇಜರ್ ಮಣಿವಣ್ಣನ್, ಆಯುಕ್ತ ಡಾ.ಕೆ.ರಾಕೇಶ್ ಕುಮಾರ್, ಕಾರ್ಮಿಕ ಇಲಾಖೆ ಆಯುಕ್ತ ಅಕ್ರಂ ಪಾಷಾ, ಡಿಸಿಪಿ ಶರಣಪ್ಪ, ಮಕ್ಕಳ ರಕ್ಷಣಾ ನಿರ್ದೇಶನಾಲಯ ನಿರ್ದೇಶಕಿ ಲತಾಕುಮಾರಿ, ಕೇಂದ್ರ ಪರಿಹಾರ ಸಮಿತಿ ನಿರ್ದೇಶಕಿ ಅರ್ಚನಾ ಸೇರಿದಂತೆ ವಿವಿಧ ಹಂತದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

See also  ತುಮಕೂರು: ಅಂತರ್ಜಾಲದಲ್ಲಿ ಕನ್ನಡದ ಅಭಿವೃದ್ಧಿ ಸಂಶೋಧನೆಗೆ ಪೂರಕ’-ಪ್ರೊ. ಕೇಶವ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು