News Kannada
Monday, October 03 2022

ಬೆಂಗಳೂರು

ಬೆಂಗಳೂರು: ಜುಲೈ 22 ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ - 1 min read

Job Fair in Bengaluru on July 22
Photo Credit : Wikimedia

ಬೆಂಗಳೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಲ್ಲೇಶ್ವರಂ, ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್ (ಎಂ ಎಸ್ ಡಿಎಫ್)  ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಗಳು, ಕೆ.ಜಿ.ರಸ್ತೆ, ಬೆಂಗಳೂರು-09, ಇವರ ಸಂಯುಕ್ತಾಶ್ರಯದಲ್ಲಿ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳಿಗೆ ಉದ್ಯೋಗವನ್ನು ಒದಗಿಸುವ ದೃಷ್ಟಿಯಿಂದ ಹಲವು ಖಾಸಗಿ ಸಂಸ್ಥೆಗಳ ಸಹಯೋಗದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಜುಲೈ 22ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 18ನೇ ಕ್ರಾಸ್, ಸಿಂಡಿಕೇಟ್ ಬ್ಯಾಂಕ್ ಎದುರು, ಮಲ್ಲೇಶ್ವರಂ, ಬೆಂಗಳೂರು- 560032 ಇಲ್ಲಿ ಆಯೋಜಿಸಲಾಗಿದೆ.

ಈ ಮೇಳದಲ್ಲಿ ಭಾಗವಹಿಸುವ ಉದ್ಯೋಗಾಕಾಂಕ್ಷಿಗಳು ಎಸ್.ಎಸ್.ಎಲ್.ಸಿ ಉತ್ತೀರ್ಣ, ಅನುತ್ತೀರ್ಣ, ಪಿ.ಯು.ಸಿ., ಐ.ಟಿ.ಐ (ಎಲ್ಲಾ ಟ್ರೇಡ್‍ಗಳು), ಡಿಪ್ಲೊಮಾ, ಸಾಮಾನ್ಯ ಪದವೀಧರರು ಹಾಗೂ ಸ್ನಾತಕೋತ್ತರ ಪದವಿ ತೇರ್ಗಡೆ ಹೊಂದಿರಬೇಕು. ತಮ್ಮ ವೈಯುಕ್ತಿಕ ವಿವರಗಳುಳ್ಳ (ಬಯೋಡಟಾ) ಹಲವು ಪ್ರತಿಗಳೊಂದಿಗೆ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08022374582, 9738631938, 9513301159, 9513301158 ನ್ನು ಸಂಪರ್ಕಿಸಬಹುದಾಗಿದೆ ಎಂದು  ತಿಳಿಸಿದೆ.

See also  ಡ್ರಗ್ಸ್ ನಂಟು : ಮಹಿಳೆ ಸೇರಿ ಮೂವರ ಮನೆಗಳ ಮೇಲೆ ದಾಳಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು