News Kannada
Wednesday, October 05 2022

ಬೆಂಗಳೂರು

ಬೆಂಗಳೂರು: ಮುರುಘಾ ಶ್ರೀ ಗಳ ಮೇಲೆ ಎಫ್.ಐ.ಆರ್, ತನಿಖೆಯ ನಂತರ ಸತ್ಯ ಹೊರ ಬೀಳಲಿದೆ ಎಂದ ಸಿಎಂ - 1 min read

bengaluru-karnataka-will-find-a-place-in-the-international-tourism-map-says-bommai
Photo Credit : By Author

ಬೆಂಗಳೂರು, ಆಗಸ್ಟ್ 28: ಮುರುಘಾ ಶ್ರೀ ಗಳ ಮೇಲೆ ಪೋಸ್ಕೊ ಅಡಿ ಎಫ್.ಐ.ಆರ್.ದಾಖಲಾಗಿದ್ದು, ತನಿಖೆಯ ನಂತರ ಸತ್ಯ ಹೊರಬೀಳಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯದವರೊಂದಿಗೆ ಮಾತನಾಡಿದರು.

ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ವಿದೆ. ತನಿಖೆ ಮಾಡಿದ ನಂತರ ಸತ್ಯ ಹೊರಗೆ ಬರಲಿದೆ . ಇದೊಂದು ಪ್ರಮುಖ ಪ್ರಕರಣ. ಪೋಸ್ಕೊ ಪ್ರಕರಣವೂ ಆಗಿದೆ ಹಾಗೂ ಚಿತ್ರದುರ್ಗದಲ್ಲಿ ಕಿಡ್ನಾಪ್ ಪ್ರಕರಣವೂ ದಾಖಲಾಗಿದೆ. ಎರಡೂ ಪ್ರಕರಣಗಳನ್ನು ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ನಾವು ಮಾತನಾಡುವುದಾಗಲಿ, ವ್ಯಾಖ್ಯಾನ ಮಾಡುವುದಾಗಲಿ ತನಿಖೆಯ ದೃಷ್ಟಿಯಿಂದ ಸರಿಯಲ್ಲ ಎಂದರು.

ಮಳೆ: ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ

ಅತಿ ಹೆಚ್ಚು ಮಳೆಯಾಗಿರುವ ಜಿಲ್ಲೆಗಳ ಜಿಲ್ಲಾಧಿಕಾರಿ ಗಳೊಂದಿಗೆ ಇಂದು ಸಂಜೆ ಮಾತನಾಡಿ, ಸ್ಥಿತಿಗತಿ ನೋಡಿ ಹೆಚ್ವಿನ ಪರಿಹಾರ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು.

ಈದ್ಗಾ ಮೈದಾನದಲ್ಲಿ ಗಣೇಶೋತ್ಸವ: ಶೀಘ್ರ ನಿರ್ಣಯ

ಚಾಮರಾಜಪೇಟೆ ಈದ್ಗಾ ಮೈದಾನದ ಬಗ್ಗೆ ಗೊಂದಲ ಏನಿಲ್ಲ. ಗಣೇಶೋತ್ಸವ ಆಚರಿಸುವ ಬಗ್ಗೆ ಕಂದಾಯ ಸಚಿವರು ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿದ್ದಾರೆ. ಅರ್ಜಿಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅದಾದ ಕೂಡಲೇ ನಿರ್ಣಯ ಮಾಡುತ್ತೇವೆ ಎಂದರು.

See also  ಬೆಂಗಳೂರು: ಆಗಸ್ಟ್ 3ರಂದು ದಾವಣಗೆರೆಯಲ್ಲಿ ಸಿದ್ದು ಅವರ 75ನೇ ಹುಟ್ಟುಹಬ್ಬ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು