ಬೆಂಗಳೂರು: ಜೂನ್ 1ರಂದು ಕಾಂಗ್ರೆಸ್ ತೊರೆದಿದ್ದ ವಕೀಲ ಬ್ರಿಜೇಶ್ ಕಾಳಪ್ಪ ಅವರು ಎಎಪಿ ಸೇರಲು ಸಜ್ಜಾಗಿದ್ದಾರೆ. ಭಾನುವಾರ ಅವರು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾದರು.
ಶನಿವಾರ, ಎಎಪಿ ರಾಜ್ಯ ಘಟಕವು ರಾಜ್ಯದ ಹಿರಿಯ ನಾಯಕರೊಬ್ಬರು ಪಕ್ಷವನ್ನು ಸೇರುತ್ತಿದ್ದಾರೆ ಎಂದು ಘೋಷಿಸಿತ್ತು. 2022 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಳಪ್ಪ ಮಡಿಕೇರಿಯಿಂದ ಸ್ಪರ್ಧಿಸುವ ಸಾಧ್ಯತೆ.