News Kannada
Monday, January 30 2023

ಬೆಂಗಳೂರು

ಬೆಂಗಳೂರು: ವಿಶೇಷ ಚೇತನರ ಆರೋಗ್ಯಕ್ಕಾಗಿ ವಿಶೇಷ ವಿಮಾ ಯೋಜನೆ ಘೋಷಿಸಿದ ಮುಖ್ಯಮಂತ್ರಿ

Covid-19, daily routine of citizens, measures taken to ensure that economy is not affected
Photo Credit : News Kannada

ಬೆಂಗಳೂರು: ವಿಶೇಷ ಚೇತನರ ಆರೋಗ್ಯಕ್ಕಾಗಿ ವಿಶೇಷ ವಿಮಾ ಯೋಜನೆ ರೂಪಿಸಿ, 5 ಲಕ್ಷದ ವರೆಗಿನ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವ ಯೋಜನೆ ಪ್ರಾರಂಭಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಅವರು ಇಂದು ವಿಶೇಷ ಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ವತಿಯಿಂದ ಆಯೋಜಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆ -2022ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಸರ್ಕಾರದ ವಸತಿ ಯೋಜನೆಗಳಲ್ಲಿ ಅಂಗವಿಕಲಿಗೆ ಶೇ.3 ರಷ್ಟು ಮೀಸಲಾತಿ :

ವಿಶೇಷ ಚೇತನರು ದೈರ್ಯದಿಂದ ಯಶಸ್ವಿಯಾಗಿ.‌ಬದುಕು ನಡೆಸಲು ಸರ್ಕಾರ ಎಲ್ಲ ಸಹಕಾರವನ್ನು ನೀಡಲಿದೆ. ಸರ್ಕಾರ ನಿರ್ಮಿಸುವ ಮನೆಗಳಲ್ಲಿ ವಿಶೇಷ ಚೇತನರಿಗೆ ನೀಡುವಲ್ಲಿ ಶೇ.3 ರಷ್ಟು ಮೀಸಲಾತಿಯನ್ನು ನೀಡಲಾಗುವುದು. ಬುದ್ಧಿಮಾಂದ್ಯ ಮಕ್ಕಳಿಗೆ ಶೆಲ್ಟರ್ಡ್ ವರ್ಕ್ ಶಾಪ್ ಸ್ಥಾಪಿಸಲು ತೀರ್ಮಾನಿಸಲಾಗಿದೆ ಎಂದರು.

ವಿಶೇಷ ಚೇತನರಿಗೆ ಮಾರ್ಚ್ 31ರೊಳಗೆ 2 ಸಾವಿರ ಟ್ರೈ ಸೈಕಲ್ :

ಸರ್ಕಾರದ ವತಿಯಿಂದ ವಿಶೇಷ ಚೇತನರು ಪವರ್ಡ್ ಟ್ರೈಸೈಕಲ್ ನೀಡಲಾಗುತ್ತಿದೆ. ಈ ವರ್ಷ ಈ ಯೋಜನೆಗೆ 25 ಕೋಟಿ ರೂ.ಗಳನ್ನು ನೀಡಿ 2 ಸಾವಿರ ಟ್ರೈ ಸೈಕಲ್ ಗಳನ್ನು ಮಾರ್ಚ್ 31ರೊಳಗೆ ನೀಡಲು ತೀರ್ಮಾನಿಸಿರುವುದಾಗಿ ತಿಳಿಸಿದರು.

ಮುಂದಿನ ಬಜೆಟ್ ನಲ್ಲಿ ವಿಕಲಚೇತನರ ವಿದ್ಯಾಭ್ಯಾಸಕ್ಕಾಗಿ ವಿಶೇಷ ಅನುದಾನ:

ವಸತಿ ಶಾಲೆಗಳಲ್ಲಿ ಬುದ್ದಿಮಾಂದ್ಯ ಮಕ್ಕಳಿಗೆ ನೀಡಲಾಗುತ್ತಿದ್ದ 6800 ರೂ.ಗಳನ್ನು 10200 ರೂ.ಗಳಿಗೆ ಹೆಚ್ಚಿಸಲಾಗಿದೆ. ಬುದ್ಧಿಮಾಂದ್ಯ ಮಕ್ಕಳ ವಸತಿರಹಿತ ಶಾಲೆಗಳಲ್ಲಿ ನೀಡಲಾಗುತ್ತಿದ್ದ 6000 ರೂ.ಗಳನ್ನು 9000 ರೂ.ಹೆಚ್ಚಿಸಿ ನೀಡಲಾಗುತ್ತಿದೆ. ಅಂಧ, ಕಿವುಡ ಮಕ್ಕಳ ವಸತಿ ಶಾಲೆಗಳಲ್ಲಿರುವವರಿಗೆ 9300 ರೂ.ಗಳನ್ನು, ವಸತಿರಹಿತ ಶಾಲೆಗಳ ಅಂಧಕಿವುಡ ಮಕ್ಕಳಿಗೆ 7800 ರೂ.ಗಳನ್ನು ,ಹಗಲುಸೇವೆ ಯೋಗಕ್ಷೇಮ ಕೇಂದ್ರಗಳಿಗೆ 15000 ರೂ.ಗಳನ್ನು , ವೃದ್ಧಾಶ್ರಮ ಕೇಂದ್ರಗಳ ನಿರ್ವಹಣೆಗೆ 12 ಲಕ್ಷ ರೂ. ನೀಡಲಾಗುತ್ತಿದೆ. ಮುಖ್ಯಮಂತ್ರಿಯಾದ ತಕ್ಷಣ ವಿಕಲಚೇತನರ ಮಾಸಾಶನವನ್ನು ಹೆಚ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಸವಲತ್ತುಗಳನ್ನು ಹೆಚ್ಚಿಸಲಾಗುವುದು. ಆಸಿಡ್ ದಾಳಿಯಿಂದ ಬಳಲುವ ಹೆಣ್ಣು ಮಕ್ಕಳಿಗೆ 3000 ರೂ. ದಿಂದ 10000 ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ. ವಿಕಲಚೇತನರ ವಿದ್ಯಾಭ್ಯಾಸಕ್ಕಾಗಿ ಮುಂದಿನ ಬಜೆಟ್ ನಲ್ಲಿ ವಿಶೇಷ ಅನುದಾನವನ್ನು ಮೀಸಲಿರಿಸಲಾಗುವುದು ಎಂದರು.

ವಿಕಲಚೇತನರು ವಿಶೇಷವಾದ ದೇವರ ಮಕ್ಕಳು :

ದೇವರು ಸೃಷ್ಟಿ ಮಾಡುವಾಗ ಹಲವಾರು ಸವಾಲುಗಳನ್ನು ಮನುಷ್ಯನಿಗೆ ಇಟ್ಟಿರುತ್ತಾನೆ. ಎಲ್ಲ ಅಂಗ ಇದ್ದವರಿಗೂ ದೇವರು ಸವಾಲು ಇಟ್ಡಿರುತ್ತಾನೆ‌. ಅಂಗಾಂಗಳ ಕೊರತೆ ಇದೆಯೆಂಬ ಕೀಳರಿಮೆ ಬೇಡ. ವಿಕಲಚೇತನರು ವಿಶೇಷವಾದ ದೇವರ ಮಕ್ಕಳು. ಸವಾಲುಗಳನ್ನು ಎದುರಿಸುವ ವಿಶೇಷ ಶಕ್ತಿಯನ್ನು ಹಾಗೂ ಮನೋಸ್ಥೈರ್ಯವನ್ನು ದೇವರು ನಿಮಗೆ ನೀಡಿದ್ದಾನೆ. ನೀವು ಆತ್ಮ ವಿಶ್ವಾಸದಿಂದ ಇರಬೇಕು. ನಾವೂ ಇತರರಂತೆ ಬದುಕಿ ತೋರಿಸುತ್ತೇವೆ ಎಂಬ ಛಲ ಮತ್ತು ನಂಬಿಕೆ ಇರಬೇಕು. ನಿಮಗೆ ಅನುಕಂಪದ ಅವಶ್ಯಕತೆ ಇಲ್ಲ. ವಿಕಲಚೇತನರನ್ನು ಸಶಕ್ತಗೊಳಿಸುವ ಸಮಾಜದ ಅವಶ್ಯಕತೆ ಇದೆ. ಕೆಳಗೆ ಬೀಳುವ ವ್ಯಕ್ತಿಯನ್ನು ಮೇಲೆತ್ತುವುದು ಮಾನವ ಧರ್ಮ, ಅದನ್ನು ಮನುಷ್ಯರು ಮರೆಯದೇ ನೆರವು ನೀಡಬೇಕು. ಇದು ವಿಶ್ವ ಮಾನವ ಸಮಾಜ. ಒಬ್ಬರಿಗೊಬ್ಬರು ಕೈ ಹಿಡಿದು ನಡೆಯುವ ಮಾನವೀಯ ಗುಣವನ್ನು ಎಲ್ಲರೂ ಪಾಲಿಸಬೇಕು ಎಂದರು.

See also  ಬೆಂಗಳೂರು: ಬೆಂಗಳೂರು-ಮೈಸೂರು ರಸ್ತೆ ಶೇ.40ರಷ್ಟು ಕಮಿಷನ್ ಯೋಜನೆಯೇ ಎಂದ ಕಾಂಗ್ರೆಸ್

ದಿವ್ಯಾಂಗ ಮಕ್ಕಳ ಸಹಾಯಕ್ಕೆ ಬರಲು ಕನ್ನಡ ಜನತೆಗೆ ಮುಖ್ಯಮಂತ್ರಿಗಳ ಕರೆ :

ಎಲ್ಲ ಅಂಗಾಂಗಳು ಸರಿಯಿದ್ದವರಿಗೂ ಸಮಾಧಾನ ಇರುವುದಿಲ್ಲ. ಪರೋಪಕಾರದ ಗುಣವನ್ನು ಬೆಳೆಸಿಕೊಂಡರೆ ಮಾತ್ರ ಸಮಾಧಾನ ದೊರೆಯುತ್ತದೆ. ಸಶಕ್ತರಾಗಿರುವವರು ದಿವ್ಯಾಂಗ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಿ, ಸಹಾಯ ಮಾಡಬೇಕು. ರಾಜ್ಯದಲ್ಲಿ ಸುಮಾರು 40 ರಿಂದ 50 ಲಕ್ಷ ದಿವ್ಯಾಂಗ ಮಕ್ಕಳಿದ್ದು, ಅವರ ಬೆಳವಣಿಗೆಗೆ ಏಳು ಕೊಟಿ ಕನ್ನಡಿಗರು ಸಹಾಯ ಮಾಡುವ ಹೃದಯಶ್ರೀಮಂತಿಕೆಯನ್ನು ಬೆಳೆಸಿಕೊಳ್ಳಬೇಕು. ದೇವರ ಮಕ್ಕಳಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆಯಬೇಕು.ದಿವ್ಯಾಂಗ ಮಕ್ಕಳನ್ನು ಬೆಳೆಸುವ ಪ್ರತಿಜ್ಞೆ ತೆಗೆದುಕೊಳ್ಳಬೇಕು ಎಂದು ಕನ್ನಡ ಜನತೆಗೆ ಕರೆ ನೀಡಿದರು.

ಈ ಸಂದರ್ಭದಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಚಿವ ಹಾಲಪ್ಪ ಆಚಾರ್, ಸಂಸದ ಪಿ.ಸಿ.ಮೋಹನ್,ಶಾಸಕ ರಿಜ್ವಾನ್ ಅರ್ಷದ್ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು