ಬೆಂಗಳೂರು: ಚೆನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕೆಎಸ್‌ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕೆಎಸ್‌ಡಿಎಲ್ ಸಂಸ್ಥೆಗೆ ರಾಸಾಯನಿಕ ಪೂರೈಕೆ ಸಂಬಂಧಿಸಿ ಗುತ್ತಿಗೆದಾರರದಿಂದ ಲಂಚ ಸ್ವೀಕರಿಸುವ ವೇಳೆ ಶಾಸಕ ಮಾಡಾಳ್ ವಿರೂಪಾಕ್ಷ ಅವರ ಪುತ್ರ ಪ್ರಶಾಂತ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿ 40 ಲಕ್ಷ ರೂ.ಗಳನ್ನು ವಶಪಡಿಸಿಕೊಂಡ ಪ್ರಕರಣ ಹಿನ್ನಲೆಯಲ್ಲಿ ಸಿಎಂ ಸೂಚನೆಯಂತೆ ಮಾಡಾಳ್ ರಾಜೀನಾಮೆ ನೀಡಿದ್ದಾರೆ.
ಇನ್ನು ಶಾಸಕರು ರಾಜೀನಾಮೆ ಪತ್ರದಲ್ಲಿ ತಮ್ಮ ಕುಟುಂಬದ ವಿರುದ್ಧ ಷಡ್ಯಂತ್ರ ನಡೆಸಲಾಗಿದೆ ಎಂದು ವಿವರಿಸಿದ್ದಾರೆ. ಸರ್ಕಾರದ ಮೇಲೆ ಮುಜುಗರ ಆಗಬಾರದು ಎಂದು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಹುಟ್ಟೂರಲ್ಲಿಯೂ ದಾಳಿ: ದಾವಣಗೆರೆ ಜಿಲ್ಲೆಯ ಶಾಸಕರ ಹುಟ್ಟೂರು ಚನ್ನೇಶಪುರದ ನಿವಾಸದ ಮೇಲೂ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಲೋಕಾಯುಕ್ತ ಎಸ್‌ಪಿ ಕೌಲಾಪುರೆ ದಾಳಿ ನೇತೃತ್ವ ವಹಿಸಿದ್ದರು.