ಬೆಂಗಳೂರು: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಎಎಪಿ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ.
ಈ ಪಟ್ಟಿಯಲ್ಲಿ 28 ಹೆಸರುಗಳಿದ್ದು, ಎಲ್ಲಾ ಅಭ್ಯರ್ಥಿಗಳು ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.
ಇಲ್ಲಿಯವರೆಗೆ ಹೆಚ್ಚಿನ ಸಂಖ್ಯೆಯ ಅಭ್ಯರ್ಥಿಗಳನ್ನು ಘೋಷಿಸಿರುವುದು ಮಾತ್ರವಲ್ಲದೆ, 224 ವಿಧಾನಸಭಾ ಕ್ಷೇತ್ರಗಳ ಪೈಕಿ 168 ಸ್ಥಾನಗಳಲ್ಲಿ ಪ್ರಾಮಾಣಿಕ ಜನ ರನ್ನು ಆಯ್ಕೆ ಮಾಡಿದೆ ಎಂದು ಪಕ್ಷ ಹೇಳಿಕೆಯಲ್ಲಿ ತಿಳಿಸಿದೆ.
ಎಎಪಿ ಹೆಚ್ಚಿನ ಸಂಖ್ಯೆಯ ರೈತರು, ಯುವಕರು, ಮಹಿಳೆಯರು ಮತ್ತು ವಿದ್ಯಾವಂತ ವೃತ್ತಿಪರರನ್ನು ಹೊಂದಿದೆ ಎಂದು ಹೇಳಿಕೆ ತಿಳಿಸಿದೆ.
ನಮ್ಮ ಅಭ್ಯರ್ಥಿಗಳ ಸರಾಸರಿ ವಯಸ್ಸು 47 ವರ್ಷಗಳು. ಒಟ್ಟು 16 ರೈತರು, 13 ಮಹಿಳೆಯರು, 18 ವಕೀಲರು, 10 ವೈದ್ಯರು, 10 ಎಂಜಿನಿಯರ್ ಗಳಿಗೆ ಟಿಕೆಟ್ ನೀಡಲಾಗಿದೆ. ಡಾಕ್ಟರೇಟ್ ಪಡೆದ ಐದು ಅಭ್ಯರ್ಥಿಗಳು ಮತ್ತು ಸ್ನಾತಕೋತ್ತರ ಪದವಿ ಪಡೆದವರು 41, 82 ಪದವೀಧರರು ಅಭ್ಯರ್ಥಿಗಳಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.