ಬೆಂಗಳೂರು: ಧಾರವಾಡದ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರವೀಣ್ ಕಮ್ಮಾರ್ ಎಂಬುವವರನ್ನು ಹತ್ಯೆ ಮಾಡಲಾಗಿದೆ. ಈ ಬಗ್ಗೆ ಟ್ವೀಟ್ ಮೂಲಕ ಸಂಸದ ತೇಜಸ್ವಿ ಸೂರ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.
ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ಪ್ರವೀಣ ಕಮ್ಮಾರ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ರಾಜಕೀಯ ವಿಷಯವಾಗಿಯೇ ಈ ಹತ್ಯೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಪ್ರವೀಣ ಕಮ್ಮಾರ ಬಿಜೆಪಿ ಪಾಳೆಯದಲ್ಲಿ ಗುರುತಿಸಿಕೊಂಡಿದ್ದ. ನಿನ್ನೆ ತಾನೇ ಅಮೃತ ದೇಸಾಯಿ ಅವರ ನಾಮಪತ್ರ ಸಲ್ಲಿಕೆಯ ರ್‍ಯಾಲಿಯಲ್ಲೂ ಭಾಗಿಯಾಗಿದ್ದರು.
ಧಾರವಾಡ ಜಿಲ್ಲೆ ಕೋಟುರು ಗ್ರಾಮಪಂಚಾಯತ್ ಉಪಾಧ್ಯಕ್ಷ, BJYM ಕಾರ್ಯಕಾರಿಣಿ ಸದಸ್ಯ ಶ್ರೀ ಪ್ರವೀಣ್ ಕಮ್ಮಾರ ರ ಹತ್ಯೆ ನೋವು ತಂದಿದೆ.
ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ ಪ್ರವೀಣ್ ರನ್ನು ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಹತ್ಯೆಗೈದಿರುವುದು ಖಂಡನೀಯ
ಪ್ರವೀಣ್ ಕುಟುಂಬಕ್ಕೆ ಪ್ರಾಮಾಣಿಕ ನ್ಯಾಯ ಒದಗಿಸುವ ಕಾರ್ಯ @BJYMKarnataka ಮಾಡಲಿದೆ
1/2 pic.twitter.com/uWzMsL6Uuz— Tejasvi Surya (@Tejasvi_Surya) April 19, 2023