News Kannada
Friday, February 23 2024
ಮನರಂಜನೆ

ಗಾಂಧಿವಾದ ಕಿತ್ತೊಗೆಯಿರಿ ಎಂದ ನಟ ಚೇತನ್‌

ಗಾಂಧಿವಾದ ಕುರಿತು 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಅವರು, ಗಾಂಧಿಯವರ 'ಧಾರ್ಮಿಕ ಸಾಮರಸ್ಯ' ಇಂದಿನ ಅಗತ್ಯ ಎಂದು ಪ್ರತಿಪಾದಿಸುವ ಉದಾರವಾದಿಗಳಿಗೆ ನಮ್ಮ ಸಾಂವಿಧಾನಿಕ ತತ್ವಗಳು ಅರ್ಥವಾಗುತ್ತಿಲ್ಲ ಎಂದು ಗುಡುಗಿದ್ದಾರೆ.
Photo Credit : News Kannada

ಬೆಂಗಳೂರು: ನಟ ಚೇತನ್‌ ವಿವಾದಿತ ಹೇಳಿಕೆಗಳ ಮೂಲಕವೇ ಸುದ್ದಿಯಲ್ಲಿರುತ್ತಾರೆ. ಇದೀಗ ಗಾಂಧೀವಾದ ಕುರಿತು ಹೇಳಿಕೆ ನೀಡಿ ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದ್ದಾರೆ.

ಗಾಂಧಿವಾದ ಕುರಿತು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ಗಾಂಧಿಯವರ ‘ಧಾರ್ಮಿಕ ಸಾಮರಸ್ಯ’ ಇಂದಿನ ಅಗತ್ಯ ಎಂದು ಪ್ರತಿಪಾದಿಸುವ ಉದಾರವಾದಿಗಳಿಗೆ ನಮ್ಮ ಸಾಂವಿಧಾನಿಕ ತತ್ವಗಳು ಅರ್ಥವಾಗುತ್ತಿಲ್ಲ ಎಂದು ಗುಡುಗಿದ್ದಾರೆ.
‘ಖಾಸಗಿಯಾಗಿ, ನಾವೆಲ್ಲರೂ ಧರ್ಮದ ಹಕ್ಕನ್ನು ಹೊಂದಿದ್ದೇವೆ. ಸಾರ್ವಜನಿಕವಾಗಿ, ನಾವು ಜಾತ್ಯತೀತ ರಾಷ್ಟ್ರ ಅಂದರ ಧರ್ಮದಿಂದ ದೂರ ಉಳಿಯುವುದಾಗಿದೆ. ‘ಧಾರ್ಮಿಕ ಸಾಮರಸ್ಯ’ ಎಂದರೆ ಅಸಮಾನತೆಯ ಸಂರಕ್ಷಣೆ. ಇದರಿಂದಾಗಿ ಗಾಂಧಿವಾದನ್ನು ಕಿತ್ತೊಗೆಯಬೇಕು’ ಎಂದು ಚೇತನ್ ಬರದುಕೊಂಡಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ವಿ.ಡಿ ಸಾವರ್ಕರ್ ಜೊತೆಗೆ ಮಹಾತ್ಮಾ ಗಾಂಧೀಜಿ ಫೋಟೊವನ್ನು ತೆರವು ಮಾಡಬೇಕು ಎಂದು ಈಚೆಗೆ ಚೇತನ್ ಹೇಳಿಕೆ ನೀಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು