News Kannada
Saturday, February 24 2024
ಬೆಂಗಳೂರು

ಖಾಸಗಿ ಸಾರಿಗೆ ಸಂಘಟನೆಗಳಿಂದ ಇಂದು ಬಂದ್​ಗೆ ಕರೆ

Photo Credit : News Kannada

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸದೇ ಆಟ ಆಡುತ್ತಿರುವ ಸಾರಿಗೆ ಇಲಾಖೆ ವಿರುದ್ಧ ಖಾಸಗಿ ‌ಸಾರಿಗೆ ಸಂಘಟನೆ ಸಿಡಿಮಿಡಿಗೊಂಡಿದೆ. ಸರ್ಕಾರಕ್ಕೆ ಮನವಿ ಮಾಡಿ ಸಾಕಾಗಿದೆ, ಹೀಗಾಗಿ ಇಂದು ಬಂದ್ ಮಾಡುತ್ತಿದ್ದೇವೆ ಎಂದು ಹಲವು ಚಾಲಕರ ಒಕ್ಕೂಟ ಹೇಳಿವೆ. ಆ ಮೂಲಕ ರಾಜ್ಯ ಸರ್ಕಾರಕ್ಕೆ ಖಾಸಗಿ ಸಾರಿಗೆ ಸಂಘಟನೆಗಳು ಸೆಡ್ಡು ಹೊಡೆಯಲು ಸಿದ್ಧವಾಗಿವೆ.

ಇಂದು ಮಧ್ಯರಾತ್ರಿಯಿಂದ್ಲೇ ಬಂದ್ ಬಿಸಿ ಶುರುವಾಗಿದೆ, ಆಟೋ, ಟ್ಯಾಕ್ಸಿ, ಗೂಡ್ಸ್, ಖಾಸಗಿ ಬಸ್ ಸೇರಿ ವಿವಿಧ ಮಾದರಿಯ ಖಾಸಗಿ ಸಾರಿಗೆಯ ವಾಹನಗಳು ರಸ್ತೆಗೆ ಇಳಿಯಲ್ಲ. ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯನ್ನು ಒಕ್ಕೂಟ ಆಯೋಜಿಸಿದೆ. ಬಂದ್ ಯಶಸ್ಸಿಗಾಗಿ ಒಕ್ಕೂಟ ಪಣತೊಟ್ಟಿದೆ.

ಕೇವಲ ಬೆಂಗಳೂರು ಮಾತ್ರವಲ್ಲದೇ ನೆರೆಯ ಜಿಲ್ಲೆಗಳ ಖಾಸಗಿ ಬಸ್ ಮಾಲೀಕರು ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ. ಇದರ ಪರಿಣಾಮ ಬೆಂಗಳೂರು ಜನಜೀವನದ ಮೇಲೆ ಸ್ವಲ್ಪ ಮಟ್ಟಿಗೆ ಬೀರುವ ಸಂಭವ ಇದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು