News Kannada
Wednesday, July 06 2022

ಬೆಂಗಳೂರು ಗ್ರಾಮಾಂತರ

ಜನತೆಗೆ ಒಂದೇ ಸೂರಿನಡಿ ವಿವಿಧ ಇಲಾಖೆಗಳ ಸೌಲಭ್ಯ - 1 min read

Photo Credit :

ಬೆಂಗಳೂರು ಗ್ರಾಮಾಂತರ: ಜಿಲ್ಲಾಧಿಕಾರಿಗಳ  ನಡೆ, ಹಳ್ಳಿ ಕಡೆ ಕಾರ್ಯಕ್ರಮವು ಕಂದಾಯ ಇಲಾಖೆಯ ವಿಶಿಷ್ಟವಾದ  ಕಾರ್ಯಕ್ರಮವಾಗಿದ್ದು, ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡುವುದರಿಂದ, ಕಂದಾಯ ಸೇರಿದಂತೆ ವಿವಿಧ ಇಲಾಖೆಯ ಸೌಲಭ್ಯಗಳನ್ನು ಒಂದೇ ಸೂರಿನಡಿ ಜನರಿಗೆ ಪರಿಣಾಮಕಾರಿಯಾಗಿ ತಲುಪಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಹೋಬಳಿಯ ಹಸಿರುವಳ್ಳಿ ಗ್ರಾಮದಲ್ಲಿಂದು  ನಡೆದ ಜಿಲ್ಲಾಧಿಕಾರಿಗಳ ನಡೆ, ಹಳ್ಳಿಗಳ ಕಡೆ ಕಾರ್ಯಕ್ರಮದ ವೇದಿಕೆ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ, ಅವರು ಮಾತನಾಡಿದರು.

ಜನಸಾಮಾನ್ಯರ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರವು ಎಬಿಎಆರ್‌ಕೆ ಕಾರ್ಯಕ್ರಮವನ್ನು ಜಾರಿಗೊಳಿಸಿದ್ದು  ಸಾರ್ವಜನಿಕರು ಆಯುಷ್ಮಾನ್ ಭಾರತ್ ಕಾರ್ಡ್ ಅನ್ನು ಪಡೆಯುವ ಮೂಲಕ ವರ್ಷಕ್ಕೆ ಐದು ಲಕ್ಷದವರೆಗಿನ ಆರೋಗ್ಯ ಸೌಲಭ್ಯವನ್ನು ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳ ಮೂಲಕ ಪಡೆಯಬಹುದಾಗಿದೆ ಎಂದು ಹೇಳಿದರು.

ಹಸಿರುವಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಜಿಲ್ಲಾಧಿಕಾರಿ ನಡೆ, ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ 4780  ಫಲಾನುಭವಿಗಳಿಗೆ ಸೌಲಭ್ಯ ವಿತರಿಸಲಾಗುತ್ತಿದೆ ಎಂದರಲ್ಲದೆ, ಸಾರ್ವಜನಿಕರ ಮುಕ್ತವಾಗಿ ಅಹವಾಲುಗಳನ್ನು ಸಲ್ಲಿಸಿದರೆ ಸಮಸ್ಯೆ ಬಗೆಹರಿಸಲಾಗುವುದು ಎಂದು ಹೇಳಿದರು.

ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಕೆ.ಶ್ರೀನಿವಾಸಮೂರ್ತಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ  ಮಾತನಾಡಿ, ಜಿಲ್ಲಾಧಿಕಾರಿಗಳ ನಡೆ, ಹಳ್ಳಿ ಕಡೆ ಕಾರ್ಯಕ್ರಮವು ಸರ್ಕಾರದ ಉತ್ತಮ ಕಾರ್ಯಕ್ರಮವಾಗಿದ್ದು, ಜನರಿಗೆ ಉಪಯೋಗವಾಗುತ್ತಿದೆ. ಹಸಿರುವಳ್ಳಿ ಗ್ರಾಮದಲ್ಲಿ ಉದ್ಟಾಟನೆಯಾದ ಡಿಜಿಟಲ್ ಲೈಬ್ರರಿಯಿಂದ ವಿದ್ಯಾರ್ಥಿಗಳಿಗೆ ಅತ್ಯುಪಯುಕ್ತವಾಗಲಿದೆ. ಇದೇ ರೀತಿ ಪ್ರತಿ ಗ್ರಾಮ ಪಂಚಾಯಿತಿಯಲ್ಲೂ ಡಿಜಿಟಲ್ ಗ್ರಂಥಾಲಯ ಸೌಲಭ್ಯ, ಆಟದ ಮೈದಾನ ಸೌಲಭ್ಯ ಕಲ್ಪಿಸಬೇಕೆಂದು ಜಿಲ್ಲಾಧಿಕಾರಿಯವರಿಗೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಸವಲತ್ತುಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು. ಹಸಿರುವಳ್ಳಿ ಗ್ರಾಮ  ಪಂಚಾಯಿತಿ ಅಧ್ಯಕ್ಷರಾದ ಚನ್ನಕೃಷ್ಣಪ್ಪ, ಉಪಾಧ್ಯಕ್ಷರಾದ ಸಿದ್ಧಮ್ಮ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೇವಣ್ಣಪ್ಪ, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ತೇಜಸ್‌ಕುಮಾರ್, ತಹಶೀಲ್ದಾರ್ ಮಂಜುನಾಥ್, ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಸುತ್ತಮುತ್ತಲಿನ ಗ್ರಾಮಸ್ಥರು, ಜಿಲ್ಲಾ, ತಾಲ್ಲೂಕು ಹಾಗೂ ಸ್ಥಳೀಯ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

See also  ಟೊಮ್ಯಾಟೊ ಬೆಳೆ ವಿಮೆ ನೋಂದಣಿ ಮಾಡಿಸಲು ಜುಲೈ 15 ಕೊನೆಯ ದಿನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು