News Kannada
Monday, March 04 2024
ಬೆಂಗಳೂರು ಗ್ರಾಮಾಂತರ

ಕಾಂಗ್ರೆಸ್‌ ನಾಯಕರು ಮಾಡುತ್ತಿರುವ ಅಪಪ್ರಚಾರ ಬಗ್ಗೆ ಮುಸ್ಲಿಮರು ಎಚ್ಚರಿಕೆಯಿಂದ ಇರಬೇಕು: ಎಚ್‌ ಡಿಕೆ

Muslims should be careful about the propaganda being spread by Congress leaders: HDK
Photo Credit : News Kannada

ರಾಮನಗರ: ಮುಸ್ಲಿಮರ ಕುರಿತು ನನಗಿರುವ ಬದ್ಧತೆ ಕುರಿತು ಆ ಸಮುದಾಯದ ಸದಸ್ಯರಿಗ ಅರಿವಿದೆ. ಈ ಬಗ್ಗೆ ಕಾಂಗ್ರೆಸ್‌ ನಾಯಕರು ಮಾಡುತ್ತಿರುವ ಅಪಪ್ರಚಾರಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಬಿಜೆಪಿ- ಜೆಡಿಎಸ್ ಮೈತ್ರಿ ಬೆನ್ನಲ್ಲೇ ಬಿಡದಿಯಲ್ಲಿರುವ ಎಚ್‌.ಡಿ. ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ, ಎಚ್‌.ಡಿ. ದೇವೇಗೌಡ ಅವರ ನೇತೃತ್ವದಲ್ಲಿ ಭಾನುವಾರ ಪಕ್ಷದ ಶಾಸಕರು, ಪರಿಷತ ಸದಸ್ಯರು, ಮಾಜಿ ಶಾಸಕರು, ಪಕ್ಷದ ಪದಾಧಿಕಾರಿಗಳು ಹಾಗೂ ಮುಖಂಡರ ಸಭೆ ಬಳಿಕ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಕಳೆದ ಬಾರಿ ಮುಸ್ಲಿಮರಿಗೆ ಸಮಸ್ಯೆಯಾದಾಗ ಧ್ವನಿ ಎತ್ತಿ, ಅವರ ಪರವಾಗಿ ನಿಂತಿದ್ದು ನಾನು. ಹಾಗಾಗಿ, ಸಮುದಾಯದವರು ಯಾವುದೇ ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದರು. ಬಿಜೆಪಿ ಜೆಡಿಎಸ್ ಮೈತ್ರಿಗೆ ಇಂದಿನ ಸಭೆಯಲ್ಲಿ ಸರ್ವಾನುಮತದಿಂದ ಒಪ್ಪಿಗೆ ನೀಡಲಾಗಿದೆ. ಮುಂದಿನ ಒಂದು ತಿಂಗಳೊಳಗೆ 31 ಜಿಲ್ಲೆಗಳಲ್ಲೂ ಸಭೆ ಮಾಡಿ, ಎಲ್ಲಾ ಸಮಸ್ಯೆಗಳನ್ನ ಬಗೆಹರಿಸಲಾಗುವುದು. ಮಸ್ಕಿಯಿಂದ ನಮ್ಮ ಅಭ್ಯರ್ಥಿಗಳಿಗೆ ಟಿಕೆಟ್ ಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಯಾಗುವುದಿಲ್ಲ. ಬಗ್ಗೆ ನಾನು ಭರವಸೆ ಕೊಡುತ್ತೇನೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು