News Karnataka Kannada
Thursday, April 25 2024
ಬೆಂಗಳೂರು

ಬೆಂಗಳೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಹೆಚ್‌ ಡಿ ಕುಮಾರಸ್ವಾಮಿ ಆಯ್ಕೆ

45 Congress MLAs in touch with BJP: Kumaraswamy
Photo Credit : News Kannada

ಬೆಂಗಳೂರು: ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನಸಭೆಯಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲ 19 ಶಾಸಕರು ಹಾಗೂ ವಿಧಾನ ಪರಿಷತ್‌ ಸದಸ್ಯರು ಭಾಗಿಯಾಗಿದ್ದರು.

ಕಳೆದ ವಿಧಾನಸಭೆ ಅವಧಿಯಲ್ಲೂ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರೇ ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕರಾಗಿ ಸದನದಲ್ಲಿ ಪಕ್ಷವನ್ನು ಮುನ್ನಡೆಸಿದ್ದರು. ವಿಧಾನಮಂಡಲದಲ್ಲಿ ಜನಪರವಾಗಿ, ವಿಷಯಾಧಾರಿತವಾಗಿ ಹೋರಾಟ ಮಾಡುವ ಬಗ್ಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಸ್ವೀಕರ್‌ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್‌ ನ ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು. ಕಳೆದ 2 ದಿನಗಳಿಂದ ಅಧಿವೇಶನಕ್ಕೆ ಗೈರಾಗಿದ್ದ ಜೆಡಿಎಸ್ ನಾಯಕರು ಶುಭ ದಿನ, ಶುಭ ಗಳಿಗೆ ನೋಡಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಕುಮಾರಸ್ವಾಮಿ, ಹೆಚ್​ಡಿ ರೇವಣ್ಣ, ಸ್ವರೂಪ್, ಶಾರದಾ ನಾಯಕ್, ಸಿ.ಬಿ.ಸುರೇಶ್‌ ಬಾಬು ಪ್ರಮಾಣವಚನ ಸ್ವೀಕರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು