News Kannada
Saturday, February 24 2024
ಬೆಂಗಳೂರು ನಗರ

ಇಂದು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ

Photo Credit :

ಇಂದು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾದು ಕುಳಿತಿರುವ ವಿದ್ಯಾರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಮಾರ್ಚ್ ತಿಂಗಳಿನಲ್ಲಿ ಪಿಯುಸಿ ಪರೀಕ್ಷೆಗಳು ನಡೆದಿದ್ದು, ಇಂದು (ಎಪ್ರಿಲ್ 30) ಫಲಿತಾಂಶ ಹೊರಬೀಳಲಿದೆ.

ವಿದ್ಯಾರ್ಥಿಗಳು www.pue.kar.nic.in ವೆಬ್ ಸೈಟ್ ನಲ್ಲಿ ನೋಂದಣಿ ಸಂಖ್ಯೆಯನ್ನು ನಮೂದಿಸಿ ಫಲಿತಾಂಶವನ್ನು ವೀಕ್ಷಿಸಬಹುದು. ಮಾರ್ಚ್ 1 ರಿಂದ ಮಾರ್ಚ್ 17ರವರೆಗೆ ನಡೆದ 2017-18ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸುಮಾರು 6.90 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಂಡಿದ್ದರು. ಅದರಲ್ಲಿ 3,53,000 ವಿದ್ಯಾರ್ಥಿಗಳು ಮತ್ತು 3,34,000 ವಿದ್ಯಾರ್ಥಿನಿಯರಿದ್ದರು.

ಸೋಮವಾರ ಮಧ್ಯಾಹ್ನ 1 ಗಂಟೆಗೆ ಫಲಿತಾಂಶವನ್ನು ವೆಬ್‌ಸೈಟ್‌ಗಳಲ್ಲಿ ನೋಡಬಹುದು. ಮೇ 1 ರಂದು ಆಯಾ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಫಲಿತಾಂಶವನ್ನು

kar.nic.in ,karresults.nic.in ಮತ್ತು pue.kar.nic.in ವೆಬ್‌ಸೈಟ್‌ಗಳ ಮೂಲಕ ಪಡೆದುಕೊಳ್ಳಬಹುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
189

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು