News Kannada
Monday, September 25 2023
ಬೆಂಗಳೂರು ನಗರ

ಬೆಂಗಳೂರಿನ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಗವಿಗಂಗಾಧರೇಶ್ವರನನ್ನು ಸ್ಪರ್ಶಿಸಿದ ಸೂರ್ಯರಶ್ಮಿ

New Project 11 3
Photo Credit :

ಮಕರ ಸಂಕ್ರಾಂತಿಯ ದಿನವಾದ ಇಂದು ಸೂರ್ಯನು ದಕ್ಷಿಣಾಯನದಿಂದ ಪಥ ಬದಲಿಸಿ ಉತ್ತರಾಯಣ ಚಲನೆಗೆ ತೊಡಗುವ ದಿನ. ಈ ವೇಳೆ ಬೆಂಗಳೂರಿನ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಸೂರ್ಯರಶ್ಮಿಯು ಗವಿಗಂಗಾಧರೇಶ್ವರನನ್ನು ಸ್ಪರ್ಶಿಸುವ ಪ್ರಕೃತಿಯ ಐತಿಹಾಸಿಕ ಕೌತುಕ ನಡೆಯಿತು.

ಆರಂಭದಲ್ಲಿ ನಂದಿವಾಹನವನ್ನು ಸ್ಪರ್ಶಿಸಿದ ಸೂರ್ಯರಶ್ಮಿಯು ಕೆಲ ಕ್ಷಣಗಳಲ್ಲೇ ಶಿವಲಿಂಗವನ್ನು ಸ್ಪರ್ಶಿಸಿತು. ಈ ಕೌತುಕ ಸಂಜೆ 5.13ರಿಂದ ಪ್ರಾರಂಭವಾಗಿ 2 ನಿಮಿಷ 13 ಸೆಕೆಂಡುಗಳ ಕಾಲ ನಡೆಯಿತು.

ಸೂರ್ಯರಶ್ಮಿ ಸ್ಪರ್ಶಿಸುವ ವೇಳೆ ಶಿವಲಿಂಗಕ್ಕೆ ವಿಶೇಷ ಬಗೆಬಗೆಯ ಅಭಿಷೇಕಗಳು ನಡೆದವು. ಸೂರ್ಯನ ಕಿರಣಗಳ ಅದ್ಭುತ ಅಭಿಷೇಕದ ಜೊತೆಗೆ ಗಂಗಾಧರೇಶ್ವರನಿಗೆ ಹಾಲು, ಎಳನೀರು, ಪವಿತ್ರ ಜಲದಿಂದ ಅಭಿಷೇಕ ಮಾಡಲಾಯಿತು.
ಕಳೆದ ವರ್ಷ ಮೋಡದಿಂದಾಗಿ ಈ ವಿಸ್ಮಯ ನಡೆದಿರಲಿಲ್ಲ. ಕೋವಿಡ್​ ಹಿನ್ನೆಲೆಯಲ್ಲಿ ಈ ಬಾರಿ ಸೂರ್ಯರಶ್ಮಿ ಸ್ಪರ್ಶ ಕಾಲದಲ್ಲಿ ಭಕ್ತರಿಗೆ ದೇವರ ದರ್ಶನ ಮಾಡಲು ಅವಕಾಶ ನೀಡಿರಲಿಲ್ಲ.

See also  ರಾಜ್ಯದಲ್ಲಿ 14 ದಿನ ಜನತಾ ಕರ್ಫ್ಯೂ, ನಾಳೆ ಸಂಜೆಯಿಂದ ಆರಂಭ: ಬಿಎಸ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು