
ಬೆಂಗಳೂರು: ನಗರ ಪೊಲೀಸ್ ಆಯುಕ್ತರಾಗಿದ್ದ ಅಲೋಕ್ ಕುಮಾರ್ ಅವರನ್ನು ದಿಢೀರ್ ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ಎಡಿಜಿಪಿ ಭಾಸ್ಕರ್ ರಾವ್ ಅವರನ್ನು ನಿಯೋಜನೆ ಮಾಡಲಾಗಿದೆ.
ಅಲೋಕ್ ಕುಮಾರ್ ಅವರು ಅತೃಪ್ತ ಶಾಸಕರ ರಾಜೀನಾಮೆ ವೇಳೆ ವಿಧಾನಸೌಧದಲ್ಲಿ ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸಿಲ್ಲ ಎಂದು ಬಿಜೆಪಿ ಬಹಿರಂಗ ಆಕ್ಷೇಪಕ್ಕೆ ಗುರಿಯಾಗಿದ್ದರು.
ಇದೀಗ ನೇಮಕವಾಗಿರುವ ಭಾಸ್ಕರ್ ರಾವ್ ಅವರು ಲೋಕಸಭಾ ಚುನಾವಣೆಯ ವೇಳೆ ದೋಸ್ತಿ ಸರ್ಕಾರವನ್ನು ಟೀಕಿಸುವ ರೀತಿ ಟ್ವೀಟ್ ಮಾಡಿದ್ದರು. ಇದೀಗ ನಗರ ಪೊಲೀಸ್ ಆಯುಕ್ತರಾಗಿ ಭಾಸ್ಕರ್ ಅವರನ್ನು ಯಡಿಯೂರಪ್ಪ ಅವರ ಸರ್ಕಾರ ನೇಮಕ ಮಾಡಿದೆ.