ಬೆಂಗಳೂರು: ನಗರ ಪ್ರದೇಶದಲ್ಲಿ 10 ವರ್ಷಕ್ಕೂ ಹೆಚ್ಚು ಕಾಲ ಕಾರ್ಯ ನಿರ್ವಹಿಸಿದ ಶಿಕ್ಷಕರನ್ನು ಕಡ್ಡಾಯವಾಗಿ ಗ್ರಾಮೀಣ ಪ್ರದೇಶಕ್ಕೆ ವರ್ಗಾವಣೆ ಮಾಡಬೇಕೆಂಬ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
ಈ ಸಂಬಂಧ ಸರ್ಕಾರದ ಅಧಿಸೂಚನೆ ಪ್ರಶ್ನಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಚ್.ಜಿ.ರಮೇಶ್ ಮತ್ತು ನ್ಯಾಯಮೂರ್ತಿ ಮೊಹಮದ್ ನವಾಜ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಲೇವಾರಿ ಮಾಡಿದೆ.