ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾಧ್ಯಮದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಇಂದು ದೆಹಲಿಗೆ ತೆರಳುತ್ತಿದ್ದಾರೆ.
ಈ ವೇಳೆ ಕೇಂದ್ರ ಜಲಶಕ್ತಿ ಸಚಿವರು ಮತ್ತು ಆರೋಗ್ಯ ಸಚಿವರನ್ನು ಭೇಟಿ ಮಾಡಲು ಪ್ರಯತ್ನಿಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
ಇಂದು ಸಂಜೆಯೇ ದೆಹಲಿಯಿಂದ ವಾಪಾಸಾಗುತ್ತಿದ್ದೇನೆ. ಸಚಿವ ಭೇಟಿಗೆ ಯತ್ನಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ಯಲಹಂಕ ಶಾಸಕ ವಿಶ್ವನಾಥ್ ವಿಷಯದ ಬಗ್ಗೆ ಏನೂ ಪ್ರತಿಕ್ರಿಯೆ ನೀಡುವುದಿಲ್ಲ. ಈಗಾಗಲೇ ಪೊಲೀಸರು ದೂರು ದಾಖಲಿಸಿದ್ದಾರೆ. ಪೊಲೀಸ್ ಕಮಿಷನರ್ ಪ್ರಾಥಮಿಕ ಹಂತದ ತನಿಖೆ ಮಾಡಲಿದ್ದಾರೆ. ಕಾನೂನಿನ ಪ್ರಖಾರವೇ ತನಿಖೆ ನಡೆಯಲಿದೆ ಎಂದು ಹೇಳಿದ್ದಾರೆ.