ಬೆಂಗಳೂರು: ಜೆಡಿಎಸ್ ಜತೆ ಯಾವುದೇ ಕಾರಣಕ್ಕೂ ಹೊಂದಾಣಿಕೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ ಹೇಳಿದರು. ಅವರು ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ಮತದಾರರಿಗೆ ಧನ್ಯವಾದಗಳನ್ನು ತಿಳಿಸಿ, ಅತಂತ್ರ ವಿಧಾನಸಭೆ ರಚನೆ ಆಗುವುದಿಲ್ಲ. ನಾವೇ ಸರ್ಕಾರ ರಚಿಸುತ್ತೇವೆ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ದಲಿತ ಮುಖ್ಯಮಂತ್ರಿ ವಿಚಾರ ಹೈಕಮಾಂಡ್ ಗೆ ಬಿಟ್ಟದ್ದು. 15 ರ ಸಂಜೆ ಕಳೆದರೆ ಎಲ್ಲದಕ್ಕೂ ಉತ್ತರ ದೊರಕಲಿದೆ ಎಂದು ಹೇಳಿದರು.