ಬೆಂಗಳೂರು: ಚುನಾವಣೆ ಹತ್ತಿರ ಬರುತ್ತಿರುವಂತೆ ಪಕ್ಷಾಂತರ ಮಾಡುವವರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಅಫ್ಜಲ್ ಪುರದ ಬಿಜೆಪಿ ಮಾಜಿ ಶಾಸಕ ಎಂವೈ ಪಾಟೀಲ್ ಸೋಮವಾರ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಗುತ್ತೇದಾರ್ ವಾಗ್ದಾಳಿ ಮಾಡಿದ ಹಿನ್ನೆಲೆಯಲ್ಲಿ ಪಾಟೀಲ್ ಅವರನ್ನು ಕಾಂಗ್ರೆಸ್ ಗೆ ಸೆಳೆಯಲು ಖರ್ಗೆ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಮಾಲೀಕಯ್ಯ ಗುತ್ತೇದಾರ್ ಅವರನ್ನು ಪಕ್ಷದಲ್ಲಿ ಉಳಿಸಲು ಪ್ರಯತ್ನಿಸಲಾಗಿದೆ. ಆದರೆ ಹಿರಿಯ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದರಿಂದ ಅವರನ್ನು ಉಚ್ಛಾಟಿಸಬೇಕಾಯಿತು ಎಂದು ಪರಮೇಶ್ವರ್ ತಿಳಿಸಿದ್ದಾರೆ.