ಬೆಂಗಳೂರು: ರಾಜ್ಯದಲ್ಲಿ ಇಂದು 1,565 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 2,363 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇಂದು ರಾಜ್ಯದಲ್ಲಿ 1,565 ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 8,61,647ಕ್ಕೆ ಏರಿಕೆಯಾಗಿದೆ.
ಇನ್ನು ಇಂದು 21 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 11,529ಕ್ಕೆ ಏರಿಕೆಯಾಗಿದೆ. ಇಂದು ಕೂಡ ಹೊಸ ಸೋಂಕಿತರ ಸಂಖ್ಯೆಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚಾಗಿದ್ದು, ಇಂದು 2,363 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ.
ಆ ಮೂಲಕ ಈ ವರೆಗೂ ರಾಜ್ಯದಲ್ಲಿ 8,22,953 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ.