ಬೆಂಗಳೂರು: ಬಸ್ ಪ್ರಯಾಣ ದರ ಏರಿಕೆ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಸಚಿವರು ಮಾಹಿತಿ ನೀಡಿದ್ದಾರೆ.ವೋಲ್ವೋ ಬಸ್ ಪ್ರಯಾಣ ದರವನ್ನು ಈಗಾಗಲೇ ಇಳಿಕೆ ಮಾಡಲಾಗಿದೆ. ಸರ್ಕಾರಕ್ಕೆ ಪ್ರಯಾಣ ದರ ಹೆಚ್ಚಳ ಮಾಡುವ ಉದ್ದೇಶವಿಲ್ಲ ಎಂದು ತಿಳಿಸಿದ್ದಾರೆ.
ಡೀಸೆಲ್, ಬಿಡಿ ಭಾಗಗಳ ದರ ಹೆಚ್ಚಳ, ಕೋವಿಡ್ ಮತ್ತು ಆರ್ಥಿಕ ಸಂಕಷ್ಟದ ಕಾರಣ ಬಸ್ ಪ್ರಯಾಣ ದರ ಏರಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ, ಬಸ್ ಪ್ರಯಾಣ ದರ ಏರಿಕೆ ಇಲ್ಲವೆಂದು ಸಚಿವರು ಸ್ಪಷ್ಟಪಡಿಸಿದ್ದಾರೆ.