ಬೆಂಗಳೂರು: ಹಿಂದೂಗಳು ಸೇರಿದಂತೆ ಪಾಕಿಸ್ತಾನದಲ್ಲಿನ ಎಲ್ಲ ಅಲ್ಪಸಂಖ್ಯಾತರೂ ಸುರಕ್ಷಿತವಾಗಿದ್ದಾರೆ ಎಂದು ಭಾರತದಲ್ಲಿನ ಪಾಕಿಸ್ತಾನದ ಹೈಕಮಿಷನರ್ ಅಬ್ದುಲ್ ಬಸಿತ್ ಹೇಳಿದರು.
ನಗರದ ಪ್ರೆಸ್ ಕ್ಲಬ್ನಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಬಸಿತ್, ಉಭಯ ದೇಶಗಳ ನಡುವಿನ ಸಂಬಂಧದ ಕುರಿತು ಪ್ರಸ್ತಾಪಿಸಿದರು. ಎರಡು ದೇಶಗಳ ನಡುವೆ ಕಂದಕ ಹೆಚ್ಚಾಗಿದೆ. ಇದು ಬದಲಾಗಬೇಕು, ಎರಡು ದೇಶಗಳ ನಡುವಿನ ಜನರ ನಡುವಿನ ಸಂಪರ್ಕ ಪುನರ್ ನಿರ್ಮಾಣವಾಗಬೇಕು ಎನ್ನುವುದು ನಮ್ಮ ಅಭಿಪ್ರಾಯವಾಗಿದೆ. ಈ ನಿಟ್ಟಿನಲ್ಲಿ ಉಭಯ ದೇಶಗಳ ನಡುವಿನ ಸಂಬಂಧ ಸುಧಾರಣೆ ಅಗತ್ಯ, ಇದಕ್ಕೆ ಪಾಕಿಸ್ತಾನ ಮುಕ್ತವಾಗಿದೆ ಎಂದರು.
ಪಾಕಿಸ್ತಾನಕ್ಕೆ 150 ಪರಮಾಣು ಬಾಂಬ್ಗಳ ಅಗತ್ಯ ಇತ್ತೇ ಎಂದು ಕೇಳಿದ ಪ್ರಶ್ನೆಗೆ ನಮಗೆ ಎಷ್ಟು ಬೇಕು ಎಂಬುದನ್ನು ನಮ್ಮ ದೇಶ ನಿರ್ಧರಿಸುತ್ತದೆ. ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಅವೆಲ್ಲವನ್ನೂ ಮಾಡಲಾಗುತ್ತದೆ. ಈ ವಿಷಯದಲ್ಲಿ ಬೇರೆ ದೇಶಗಳ ಅಭಿಪ್ರಾಯ ಪಡೆಯುವ ಅಗತ್ಯ ಇಲ್ಲ ಎಂದರು.
ಬೆಂಗಳೂರು: ಮೂರು ದಿನ ಬೆಂಗಳೂರಿನಲ್ಲಿ ಕಳೆದಿದ್ದೇ ಗೊತ್ತಾಗಲಿಲ್ಲ. ಅನೇಕ ಸುಂದರ ನೆನೆಪುಗಳನ್ನು ಹೊತ್ತು ನಾಳೆ ದೆಹಲಿಗೆ ಹೋಗುತ್ತಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಪಾಕಿಸ್ತಾನಕ್ಕೆ ಭೇಟಿ ನೀಡುವಂತೆ ಆಹ್ವಾನ ನೀಡಿದ್ದೇನೆ ಎಂದು ಭಾರತದಲ್ಲಿನ ಪಾಕಿಸ್ತಾನದ ಹೈಕಮಿಷನರ್ ಅಬ್ದುಲ್ ಬಸಿತ್ ಹೇಳಿದರು.