News Kannada

ಬೆಂಗಳೂರು ನಗರ

ಆಂಜನೇಯರಿಂದ ಮಾಹಿತಿ ಪಡೆದ ಸಿಎಂ - 1 min read

ಆಂಜನೇಯರಿಂದ ಮಾಹಿತಿ ಪಡೆದ ಸಿಎಂ

ಬೆಂಗಳೂರು: ಭ್ರಷ್ಟಾಚಾರ ಹಗರಣದ ಆರೋಪಕ್ಕೆ ಗುರಿಯಾಗಿರುವ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಅವರನ್ನು ಭೇಟಿ ಮಾಡಿ ಮಾಹಿತಿ ನೀಡಿದ್ದಾರೆ.

ಆದರೆ ಇದು ರಹಸ್ಯವಾಗಿ ನಡೆದಿದ್ದು, ಮಾತುಕತೆ ಸಂದರ್ಭ ಏನು ನಡೆದಿದೆ ಎಂಬುದು ಮಾತ್ರ ತಿಳಿದು ಬಂದಿಲ್ಲ. ಈಗಾಗಲೇ ಆಂಜನೇಯ ಅವರ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ಅವರ ಪ್ರಕರಣದ ಬಗ್ಗೆ ಹೈಕಮಾಂಡ್ ವರದಿ ಕೇಳಿದ್ದು ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್ ಗೆ ವರದಿ ನೀಡಬೇಕಾದ ಹಿನ್ನೆಲೆಯಲ್ಲಿ ರಹಸ್ಯ ಮಾತುಕತೆ ನಡೆದಿದ್ದು, ಈ ಸಂದರ್ಭ ಆಂಜನೇಯ ಅವರಿಂದ ವರದಿ ಪಡೆಯಲಾಗಿದೆ ಎನ್ನಲಾಗಿದೆ.

ಈ ಸಂದರ್ಭ ಸಚಿವ ಆಂಜನೇಯ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ. ದುರುದ್ದೇಶ ಪೂರ್ವಕವಾಗಿ ಪಿತೂರಿ ಮಾಡಲಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ. ಕಲ್ಯಾಣ ಇಲಾಖೆ ಹಾಸ್ಟೆಲ್ ಗಳಿಗೆ ಆಹಾರ ಪೂರೈಸುವ ಟೆಂಡರ್ ಕ್ರಿಯೆಯನ್ನು ನಿಯಮಬದ್ಧವಾಗಿ ಮಾಡಲಾಗಿದೆ. ಎಲ್ಲಿಯೂ ಅಕ್ರಮ ನಡೆದಿಲ್ಲ. ಅಧಿಕಾರಿಗಳು ವಿಳಂಬ ಮಾಡಿರುವುದಕ್ಕೆ ಉದ್ದೇಶ ಪೂರ್ವಕವಾಗಿ ನನ್ನನ್ನು ಹೊಣೆ ಮಾಡಲಾಗುತ್ತಿದೆ. ಇಲಾಖೆ ಉಪನಿರ್ದೇಶಕರು ತಮ್ಮ ಮನೆಗೆ ಕರೆದುಕೊಂಡು ಬಂದ ವ್ಯಕ್ತಿಗಳು ಯಾರು ಎಂಬ ಮಾಹಿತಿಯೇ ನನಗಿಲ್ಲ. ಮನೆಗೆ ಬಂದವರನ್ನು ಎಂದಿನಂತೆ ಮಾತನಾಡಿಸಿರುವುದನ್ನೇ ತಿರುಚಿ ಆರೋಪ ಮಾಡಲಾಗುತ್ತಿದೆ ಎಂದು ಆಂಜನೇಯ ಮುಖ್ಯಮಂತ್ರಿಗೆ ಮುಂದೆ ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ.

ಆಂಜನೇಯ ಅವರ ವಿವರಣೆ ಪಡೆದ ಮುಖ್ಯಮಂತ್ರಿಗಳು ಸಾರ್ವಜನಿಕ ಜೀವನದಲ್ಲಿ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ನಿಮ್ಮ ನಿರ್ಲಕ್ಷ್ಯದಿಂದ ಸರ್ಕಾರ ಇಕ್ಕಟ್ಟಿಗೆ ಸಿಲುಕುವಂತಾಗಿದೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ ಎಂಬ ಮಾಹಿತಿ ಇದೆಯಾದರೂ ಹೆಚ್ಚಿನ ವಿಚಾರ ಮಾತ್ರ ಗೌಪ್ಯವಾಗಿ ಉಳಿದಿದೆ. ಹೈಕಮಾಂಡ್ಗೆ ವರದಿ ನೀಡಿದ ಬಳಿಕ ಅಲ್ಲಿಂದ ಯಾವ ರೀತಿಯ ಪ್ರತಿಕ್ರಿಯೆ ಬರುತ್ತೆ ಎಂಬುವುದೇ ಕುತೂಹಲ ಕೆರಳಿಸಿದೆ.

See also  ಗೃಹ, ವೈದ್ಯಕೀಯ ಶಿಕ್ಷಣ ಸಚಿವರ ಜತೆ ಬಿ.ಎಲ್.ಸಂತೋಷ್ ಚರ್ಚೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು