News Kannada
Friday, July 01 2022

ಬೆಂಗಳೂರು ನಗರ

ಯಡಿಯೂರಪ್ಪ ಆರೋಪದಿಂದ ರಿಲೀಪ್! - 1 min read

Photo Credit :

ಯಡಿಯೂರಪ್ಪ ಆರೋಪದಿಂದ ರಿಲೀಪ್!

ಬೆಂಗಳೂರು: ಡಿ-ನೋಟಿಫಿಕೇಷನ್ ಸೇರಿದಂತೆ ಭ್ರಷ್ಟಾಚಾರದ ಪ್ರಕರಣ ಆರೋಪ ಎದುರಿಸುತ್ತಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದೀಗ ಆರೋಪ ಮುಕ್ತಗೊಂಡಿದ್ದಾರೆ.

ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ನಡೆದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಅಂದಿನ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ನೀಡಿದ ಆದೇಶವನ್ನೇ ರದ್ದುಪಡಿಸಿ ಅನೂರ್ಜಿತಗೊಳಿಸಿದೆ. ರಾಜ್ಯದ ಇತಿಹಾಸದಲ್ಲೇ ಮುಖ್ಯಮಂತ್ರಿಯೊಬ್ಬರ ವಿರುದ್ಧ ಮೊಕದ್ದಮೆ ದಾಖಲಿಸಲು  ರಾಜ್ಯಪಾಲರು ಅನುಮತಿ ನೀಡಿದ್ದ ಮೊದಲ ಪ್ರಕರಣ ಇದಾಗಿತ್ತು. ಇದರಿಂದಾಗಿ ಯಡಿಯೂರಪ್ಪ ಅವರು ಹಲವು ಅವಕಾಶವನ್ನು ಕಳೆದುಕೊಳ್ಳಬೇಕಾಗಿ ಬಂದಿತ್ತು.

ನ್ಯಾಯಾಲಯದಲ್ಲಿ ರಾಜ್ಯಪಾಲರ ಆದೇಶ ರದ್ದುಪಡಿಸುವಂತೆ ಯಡಿಯೂರಪ್ಪ ಮತ್ತು ಕುಟುಂಬವರ್ಗದವರು ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಕೈಗೆತ್ತಿಕೊಂಡ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸುಬ್ರಿತ್ ಕಮಲ್ ಮುಖರ್ಜಿ ಹಾಗೂ ನ್ಯಾಯಮೂರ್ತಿ ವಿನುತ್ ಶರಣ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಆದೇಶದವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲರಿಗೆ ರವಾನಿಸಿದೆ.

ಆರೋಪಗಳಿಗೆ ಸಂಬಂಧಿಸಿದಂತೆ ಅಂದಿನ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಖಾಸಗಿ ಪ್ರಕರಣ ದಾಖಲಿಸಲು ರಾಜ್ಯಪಾಲರು ಅನುಮತಿ ನೀಡಬಾರದು ಎಂದು ರಾಜಭವನಕ್ಕೆ ಅಧಿಕೃತ ಪತ್ರ ಕಳುಹಿಸಲಾಗಿತ್ತು.

ಆದರೆ, ಅಂದಿನ ರಾಜ್ಯಪಾಲರು ಸಂಪುಟದ ನಿರ್ಧಾರವನ್ನು ಕಡೆಗಣಿಸಿದ್ದಾರೆ. ಅಷ್ಟೇ ಅಲ್ಲ ಕಡೆಗಾಣಿಸಲು ಕಾರಣ ನೀಡದೆ ಸಿರಾಜುದ್ದೀನ್ ಭಾಷಾ ಮತ್ತಿತರರು ನೀಡಿದ್ದ ದೂರನ್ನು ನ್ಯಾಯಾಲಯದಲ್ಲಿ ದಾಖಲಿಸಲು ಅನುಮತಿ ನೀಡಿದ್ದಾರೆ.

ಅನುಮತಿ ನೀಡಿರುವ ವಿಧಾನವೂ ಸರಿಯಿಲ್ಲ. ಸಂಪುಟದ ನಿಧರ್ಾರಗಳನ್ನು ಯಾವ ಕಾರಣಕ್ಕೆ ತಿರಸ್ಕರಿಸಲಾಗಿತ್ತು ಎಂಬುದರ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಅಂದಿನ ರಾಜ್ಯಪಾಲರ ನಡವಳಿಕೆ ಬಗ್ಗೆ ಹೈಕೋರ್ಟ್ ಪ್ರಶ್ನೆ ಮಾಡಿರುವುದಲ್ಲದೆ ಈ ನಿರ್ಧಾರ ಮರುಪರಿಶೀಲಿಸಬೇಕು ಎಂದು ರಾಜಭವನಕ್ಕೆ ಕಳುಹಿಸಿ ಆದೇಶವನ್ನು ಅನೂರ್ಜಿತಗೊಳಿಸಿದ್ದಾರೆ.

See also  ಕುದಿಯುತ್ತಿದ್ದ ಸಾಂಬಾರ್ ಬಿದ್ದು ಮಗು ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು