ಬೆಂಗಳೂರು: ಬಿಬಿಎಂಪಿಗೆ ಸೇರಿದ ಕೆಟ್ಟು ನಿಂತಿದ್ದ ಕಸದ ಲಾರಿಗೆ ಯಾರೋ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ಇಲ್ಲಿನ ಮಾಗಡಿ ರಸ್ತೆಯ ಸುಮನಹಳ್ಳಿಯಲ್ಲಿ ನಡೆದಿದೆ.
ಬಿಬಿಎಂಪಿಗೆ ಸೇರಿದ ಕಸದ ಲಾರಿ ಕೆಟ್ಟು ಹೋಗಿದ್ದರಿಂದ ಹಲವು ದಿನಗಳಿಂದ ಮಾಗಡಿ ರಸ್ತೆಯ ಸುಮನಹಳ್ಳಿಯಲ್ಲಿ ನಿಂತಿತ್ತು. ಆದರೆ ಯಾರೋ ಕಿಡಿಗೇಡಿಗಳು ನಿಂತಿದ್ದ ಲಾರಿಗೆ ಬೆಂಕಿ ಹಚ್ಚಿದ್ದಾರೆ. ವಿಷಯ ತಿಳಿದ ಅಗ್ನಿಶಾಮಕ ಸಿಬ್ದಿ ಸ್ಥಳಕ್ಕೆ ಧಾವಿಸಿ ಪರಶೀಲನೆ ನಡೆಸಿದ್ದಾರೆ. ಆದರೆ ಲಾರಿ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿದೆ. ಪ್ರಕರಣ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.