ಬೆಂಗಳೂರು: ಕುಡುಕ ಡ್ರೈವರ್ ನೊಬ್ಬ ಕರ್ತವ್ಯ ನಿರತ ಟ್ರಾಫಿಕ್ ಇನ್ಸ್ಪೆಕ್ಟರ್ ಮೇಲೆ ಹಲ್ಲೆ ನಡೆಸಿ ಈಗ ಪೊಲೀಸರ ಅತಿಥಿಯಾಗಿದ್ದಾನೆ.
ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ವೇಳೆ ಮದ್ಯ ಸೇವಿಸಿ ವಾಹನ ಚಲಾಯಿಸ್ತಾ ರಿಯಲ್ ಎಸ್ಟೇಟ್ ಉದ್ಯಮಿ ಹರಿಪ್ರಕಾಶ್ ಇನ್ಸ್ಪೆಕ್ಟರ್ ಕೆ.ವಿ.ಶ್ರೀಧರ್ ಮೇಲೆ ಹಲ್ಲೆ ನಡೆಸಿದ್ದಾನೆ. ಆರೋಪಿ ಹರಿ ಪ್ರಕಾಶ್ ನನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ. ಐಪಿಸಿ ಸೆಕ್ಷನ್ 353, 504 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.