News Kannada

ಬೆಂಗಳೂರು ನಗರ

ವಿಧಾನಪರಿಷತ್ ಚುನಾವಣೆ ಮಧ್ಯಾಹ್ನದ ವೇಳೆಗೆ ಫಲಿತಾಂಶ - 1 min read

ವಿಧಾನಪರಿಷತ್ ಚುನಾವಣೆ ಮಧ್ಯಾಹ್ನದ ವೇಳೆಗೆ ಫಲಿತಾಂಶ

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ನ 25 ಸ್ಥಾನಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಆರಂಭಗೊಂಡಿದ್ದು ಫಲಿತಾಂಶ ಮಧ್ಯಾಹ್ನದ ವೇಳೆಗೆ ಪ್ರಕಟಗೊಳ್ಳುವ ಸಾಧ್ಯತೆ ಇದೆ.

MLC Polls: Counting begins in 20 centres across Karnataka-1ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ  ಬೆಳಿಗ್ಗೆ ನಾಳೆ ಬೆಳಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಆರಂಭವಾಗಿದ್ದು, ಈ ಚುನಾವಣೆಯಲ್ಲಿ ಕಡಿಮೆ ಮತದಾರರಿದ್ದರೂ ಪ್ರಾಶಸ್ತ್ಯದ ಮತ ಎಣಿಕೆ ಮಾಡಬೇಕಿರುವುದರಿಂದ ಎಣಿಕೆ ಕಾರ್ಯ ವಿಳಂಬವಾಗುವ ಸಾಧ್ಯತೆ ಇದೆಯಾದರೂ ಎಲ್ಲೆಡೆ ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡಿರುವುದರಿಂದ ಮೊದಲನೇ ಸುತ್ತಿನಲ್ಲಿ ಅಭ್ಯರ್ಥಿಗಳು ನಿರೀಕ್ಷಿತ ಮತ ಗಳಿಸಿದರೆ, ಮಧ್ಯಾಹ್ನದ ವೇಳೆಗೆ ಫಲಿತಾಂಶ ಪ್ರಕಟಗೊಳ್ಳಲಿದೆ.

ಭಾರೀ ಪೈಪೋಟಿ ಇರುವ ಕ್ಷೇತ್ರಗಳಲ್ಲಿ ನಿರೀಕ್ಷಿತ ಮತ ಅಭ್ಯಥರ್ಿಗಳಿಗೆ ಲಭ್ಯವಾಗದಿದ್ದರೆ, ಎರಡನೇ ಸುತ್ತು ಮೂರನೇ ಸುತ್ತಿನ ಮತ ಎಣಿಕೆ ನಡೆಯುವವರೆಗೂ ಅಭ್ಯರ್ಥಿಗಳು ಕಾಯಬೇಕಾಗುತ್ತದೆ. ಮೈಸೂರು, ಉಡುಪಿ-ಮಂಗಳೂರು, ಬೆಳಗಾವಿ, ಧಾರವಾಡ ಹಾಗೂ ವಿಜಾಪುರ, ಬಾಗಲಕೋಟೆ ಕ್ಷೇತ್ರಗಳಲ್ಲಿ ದ್ವಿಸದಸ್ಯತ್ವಕ್ಕೆ ಚುನಾವಣೆ ನಡೆದಿದ್ದರೆ, ಉಳಿದ ಕೊಡಗು, ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ, ನಗರ, ಕೋಲಾರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಉತ್ತರ ಕನ್ನಡ ಬಳ್ಳಾರಿ, ರಾಯಚೂರು, ಗುಲ್ಬರ್ಗ, ಬೀದರ್, ಜಿಲ್ಲೆಗಳಲ್ಲಿನ ಸ್ಥಳೀಯ ಸಂಸ್ಥೆಗಳಿಂದ ಒಬ್ಬ ಸದಸ್ಯರನ್ನು ವಿಧಾನ ಪರಿಷತ್ ಗೆ ಆಯ್ಕೆ ನಡೆಯಲಿದೆ.

25 ಸ್ಥಾನಗಳಿಗಾಗಿ 125 ಅಭ್ಯರ್ಥಿಗಳು ಕಣದಲ್ಲಿದ್ದು, ಇದರಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ತಲಾ 20 ಸ್ಥಾನಗಳಿಗೆ ಸ್ಪರ್ಧೆಗಿಳಿದಿದ್ದರೆ, ಜಾತ್ಯಾತೀತ ಜನತಾದಳ 18 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಉಳಿದವರು ಪಕ್ಷೇತರ ಅಭ್ಯರ್ಥಿಗಳಾಗಿದ್ದಾರೆ.

See also  ಮತ್ತೆ ಯೂ ಟರ್ನ್ ಹೊಡೆದ ಸರ್ಕಾರ: ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು